ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 03, 2017
ಗೌರವಾರ್ಪಣೆ
ಬದಿಯಡ್ಕ: ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ನಡೆಸಿದ ಜಿಲ್ಲಾಮಟ್ಟದ ರಸಪ್ರಶ್ನೆ ಸಧರ್ೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಬಾಲಪ್ರತಿಭೆ ಸಿಂಧೂರ ಕುಂಜಾರು ನೃತ್ಯ ಹಾಗೂ ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾಳೆ. ಕಲಿಕೆಯಲ್ಲೂ ಮುಂದಿರುವ ಈ ಪುಟಾಣಿ ಹಲವಾರು ಬಹುಮಾನಗಳನ್ನು ಗಳಿಸಿ ವಿವಿದೆಡೆ ತನ್ನ ಪ್ರತಿಭೆಯನ್ನು ಪ್ರದಶರ್ಿಸಿದ್ದಾರೆ. ಇವರನ್ನು ಹಾಗೂ ಭಾರತೀ ವಿದ್ಯಾಪೀಠ ಬದಿಯಡ್ಕದಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಖ್ಯಾತ ಯಕ್ಷಪ್ರತಿಭೆ ಸ್ವಸ್ತಿಕ್ ಶರ್ಮ ಪಳ್ಳತ್ತಡ್ಕ ಸುಮಾರು 70ಕ್ಕಿಂತಲೂ ಹೆಚ್ಚು ವೇದಿಕೆಗಳಲ್ಲಿ ವಿವಿಧ ಪಾತ್ರಗಳನ್ನು ಸಲೀಸಾಗಿ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದು.ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಪೆರ್ಲದಲ್ಲಿ ಸಬ್ಬಣ್ಣಕೋಡಿ ರಾಮ ಭಟ್ ಅವರಿಂದ ನಾಟ್ಯವನ್ನು ಅಭ್ಯಸಿಸುತ್ತಿದ್ದಾನೆ. ಇವರನ್ನು ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಆಕಾಡೆಮಿಯ ಪಯಣ-4 ಕಾರ್ಯಕ್ರಮದಲ್ಲಿ ಕನರ್ಾಟಕ ಸರಕಾರದ ಪುಸ್ತಕ ಪ್ರಾಧಿಕಾರ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಅವರು ಜಿ.ಎಚ್.ಎಸ್. ಪೆರಡಾಲ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿದರು.





