ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 04, 2017
ಬದಿಯಡ್ಕ : ಶ್ರೀ ಗಣೇಶ ಭಜನಾ ಮಂಡಳಿಯ ಆಶ್ರಯದಲ್ಲಿ ಡಿ.6ರಂದು ಬದಿಯಡ್ಕ ಶ್ರೀ ಗಣೇಶ ಮಂದಿರದಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ವಿವಿಧ ಭಜನಾ ಸಂಘಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 5.30ಕ್ಕೆ ಗಣಪತಿ ಹೋಮ, ವಿವಿಧ ಭಜನಾ ಸಂಘಗಳಿಂದ ಭಜನೆ, ಮಧ್ಯಾಹ್ನ ಅಯ್ಯಪ್ಪ ಭಕ್ತರಿಂದ ಶರಣಂ ವಿಳಿ, ಮಂಗಳಾರತಿ, ಪ್ರಸಾದ ವಿತರಣೆ, ವಿದ್ಯಾನಿಧಿ ಕಾರ್ಯಕ್ರಮ, ಪ್ರಸಾದ ಭೋಜನದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಗಲಿದೆ.




