ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 07, 2017
ಯದುವೀರ್ ಒಡೆಯರ್-ತ್ರಿಷಿಕಾ ದಂಪತಿಗೆ ಗಂಡು ಮಗು ಜನನ: ಮೈಸೂರು ರಾಜಮನೆತನಕ್ಕೆ ಯುವರಾಜನ ಆಗಮನ
ಬೆಂಗಳೂರು: ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಡಿ.6 ರಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ಅವರಿಗೆ ಹೆರಿಗೆಯಾಗಿದ್ದು, ಮೈಸೂರು ಸಂಸ್ಥಾನಕ್ಕೆ ಉತ್ತರಾಧಿಕಾರಿಯ ಆಗಮನವಾಗಿದೆ. 2015 ರಲ್ಲಿ ರಾಜಮಾತೆ ಪ್ರಮೋದಾ ದೇವಿ ಅವರು ಯದುವೀರ್ ಅವರನ್ನು ದತ್ತು ಸ್ವೀಕರಿಸಿ ಮೈಸೂರು ಸಂಸ್ಥಾನದ ರಾಜವಂಶದ ಉತ್ತರಾಧಿಕಾರಿಯನ್ನಾಗಿಸಿದ್ದರು. 2016 ರ ಜೂನ್ 27 ರಂದು ಯದುವೀರ್ ರಾಜಸ್ಥಾನ ರಾಜ ಕುಟುಂಬದ ತ್ರಿಷಿಕಾ ಕುಮಾರಿ ಅವರನ್ನು ವಿವಾಹವಾಗಿದ್ದರು.







