ಚಿಪ್ಪಾರು ಶಾಲೆಯ ಶತಮಾನೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ಉಪ್ಪಳ: ಪೈವಳಿಕೆ ಸಮೀಪದ ಚಿಪ್ಪಾರು ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸಂಭ್ರಮದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರದ ಬಿಡುಗಡೆ ಇತ್ತೀಚೆಗೆ ನಡೆಯಿತು. ಶಾಲೆಯ ಆಡಳಿತ ಮಂಡಳಿ ಸದಸ್ಯ ಶಶಿಕಾಂತ.ಜಿ.ಆರ್ ಬಿಡುಗಡೆಗೊಳಿಸಿದರು. ಮುಖ್ಯೋಪಾಧ್ಯಾಯ ದಾಸಪ್ಪ.ಕೆ, ನಿವೃತ್ತ ಮುಖ್ಯೋಪಾಧ್ಯಾಯ ನಂದವರ್ಮ.ವಿ, ಕೃಷ್ಣ ಶೆಟ್ಟಿಗಾರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಖಲೀಲ್ ನಾರ್ನಕಟ್ಟೆ, ಮಾತೃ ಮಂಡಳಿ ಅಧ್ಯಕ್ಷೆ ಜಯಲಕ್ಷ್ಮಿ.ಕೆ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕ ಚಂದ್ರಶೇಖರ ಭಟ್ ಸ್ವಾಗತಿಸಿ, ಪ್ರೇಮಲತಾ ಟೀಚರ್ ವಂದಿಸಿದರು. ಶೇಖರ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.
ಡಿ.30ರಂದು ಶಾಲೆಯ ಶತಮಾನೋತ್ಸವ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದ್ದು ಒಂದು ವರ್ಷದ ತನಕ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.