ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ : ಮೊದಲ ಟೆಸ್ಟ್ ನಲ್ಲಿ ಭಾರತಕ್ಕೆ ಸೋಲು
ಕೇಪ್ ಟೌನ್: ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 72 ರನ್ ಗಳ ಸೋಲು ಕಂಡಿದೆ.
ನಾಲ್ಕನೇ ದಿನದಂತ್ಯಕ್ಕೆ ಭಾರತ 135 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ದಕ್ಷಿಣ ಆಫ್ರಿಕಾ ವಿರುದ್ಧ ಸೋಲೊಪ್ಪಿಕೊಂಡಿತು. ದಕ್ಷಿಣ ಆಫ್ರಿಕಾ ನೀಡಿದ್ದ 208 ರನ್ ಗಳ ಗುರಿ ಬೆನ್ನಟ್ಟಿದ ಭಾರತ 82 ರನ್ ಗಳಿಸುವುದಕ್ಕೂ ಮುನ್ನವೇ 7 ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡಿತ್ತು. ನಂತರ ಆಡಿದ ಆರ್ ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ಇಬ್ಬರೂ 49 ರನ್ ಗಳನ್ನಷ್ಟೇ ಕಲೆಹಾಕಲು ಸಾಧ್ಯವಾಯಿತು. ಅಂತಿಮವಾಗಿ ಭಾರತ 135 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 72 ರನ್ ಗಳ ಸೋಲು ಕಂಡಿದೆ.