ಇಸ್ರೋ ನೂತನ ಅಧ್ಯಕ್ಷರಾಗಿ ಸಿವನ್ ಕೆ ನೇಮಕ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ(ಇಸ್ರೋ)ಯ ನೂತನ ಅಧ್ಯಕ್ಷರನ್ನಾಗಿ ಸಿವನ್ ಕೆ ಅವರನ್ನು ಕೇಂದ್ರ ಸಕರ್ಾರ ಬುಧವಾರ ನೇಮಕ ಮಾಡಿದೆ.
ಸಿವಾನ್ ಕೆ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಬಾಹ್ಯಾಕಾಶ ಇಲಾಖೆಯ ನೂತನ ಕಾರ್ಯದಶರ್ಿ ಮತ್ತು ಇಸ್ರೋದ ಮುಖ್ಯಸ್ಥರಾಗಿ ನೇಮಕ ಮಾಡಲು ಸಂಪುಟ ನೇಮಕ ಸಮಿತಿ ಒಪ್ಪಿಗೆ ಸೂಚಿಸಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.
ಜನವರಿ 12, 2015ರಲ್ಲಿ ಇಸ್ರೋ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಕನ್ನಡಿಗ, ಆಲೂರು ಸೀಳಿನ್ ಕಿರಣ್ ಕುಮಾರ್ ಅವರ ಅಧಿಕಾರವಧಿ ಮುಗಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿದರ್ೇಶಕರಾಗಿದ್ದ ಸಿವನ್ ಅವರನ್ನು ನೇಮಕ ಮಾಡಲಾಗಿದೆ.
1980 ರಲ್ಲಿ ಮದ್ರಾಸ್ ಐಐಟಿಯಿಂದ ಏರೋನಾಟಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿದ್ದ ಸಿವನ್ ಅವರು, 1982ರಲ್ಲಿ ಬೆಂಗಳೂರಿನ ಐಐಎಸ್ಸಿಯಿಂದ ಏರೋಸ್ಪೇಸ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದು, 1982ರಲ್ಲೇ ಇಸ್ರೋ ಸೇರಿಕೊಂಡಿದ್ದರು.