HEALTH TIPS

No title

                ಗೋ ರಕ್ಷಣೆ: ಹಯರ್ಾಣ, ಉತ್ತರ ಪ್ರದೇಶ, ರಾಜಸ್ತಾನಕ್ಕೆ 'ಸುಪ್ರೀಂ' ನ್ಯಾಯಾಂಗ ನಿಂದನೆ ನೋಟಿಸ್
    ನವದೆಹಲಿ: ಗೋ ರಕ್ಷಣೆ ಹೆಸರಲ್ಲಿ ದಾಳಿಗಳು ನಡೆಯುತ್ತಿದ್ದು ಈ ಬಗ್ಗೆ ವಿಶೇಷ ಸಮಿತಿಯನ್ನು ರಚನೆ ಮಾಡುವಂತೆ ಆದೇಶಿಸಿದ್ದರು ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಸುಪ್ರೀಂ ಕೋಟರ್್ ಬಿಜೆಪಿ ಅಧಿಕಾರದಲ್ಲಿರುವ ಮೂರು ರಾಜ್ಯಗಳಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.
   ರಾಜಸ್ತಾನ, ಹರಿಯಾಣ ಮತ್ತು ಉತ್ತರಪ್ರದೇಶಗಳಲ್ಲಿ ಹೆಚ್ಚಾಗಿ ಪ್ರಕರಣಗಳು ವರದಿಯಾಗಿದ್ದು ಈ ಹಿನ್ನೆಲೆಯಲ್ಲಿ ಸುಪ್ರೀಂಕೋಟರ್್ ಈ ಹಿಂದೆ ಪ್ರಕರಣಗಳ ಕುರಿತು ಪರೀಕ್ಷಿಸಲು ವಿಶೇಷ ಸಮಿತಿಯೊಂದನ್ನು ರಚನೆ ಮಾಡುವಂತೆ ಆದೇಶಿಸಿತ್ತು. ಆದರೆ ಇಲ್ಲಿಯವರೆಗೂ ಮೂರು ರಾಜ್ಯಗಳು ಯಾವುದೇ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದು ನೋಟಿಸ್ ಗೆ ಪ್ರತಿಕ್ರಿಯಿಸುವಂತೆ ಸೂಚಿಸಿದೆ.
    ಸುಪ್ರೀ ಕೋಟರ್್ ಆದೇಶವಿದ್ದರೂ ಗೋ ರಕ್ಷಣೆ ಹೆಸರಲ್ಲಿ ಹಲ್ಲೆಗಳು ನಡೆಯುತ್ತಿವೆ. ಆದರೆ ರಾಜ್ಯ ಸಕರ್ಾರಗಳು ಈ ಹಲ್ಲೆಗಳನ್ನು ತಡೆಯಲು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಅಜರ್ಿದಾರ ತುಷಾರ್ ಗಾಂಧಿ ಅವರು ಸುಪ್ರೀಂಕೋಟರ್್ ನಲ್ಲಿ ಅಜರ್ಿ ಸಲ್ಲಿಸಿದ್ದರು.
   ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿ ಗೋ ರಕ್ಷಣೆ ಹೆಸರಲ್ಲಿ ಹಲವು ಜೀವಗಳನ್ನು ಬಲಿಪಡೆದುಕೊಂಡಿರುವ ಗೋ ರಕ್ಷಕರು, ಗೋ ರಕ್ಷಣೆ ಹೆಸರಿನಲ್ಲಿ ನಡೆಸುವ ದಾಳಿಯನ್ನು ತಡೆಯಲು ಪ್ರತೀ ಜಿಲ್ಲೆಗೆ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಯನ್ನು ನೇಮಿಸುವಂತೆ ಸುಪ್ರೀಂಕೋಟರ್್ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯ ಸಕರ್ಾರಗಳಿಗೆ ಆದೇಶ ನೀಡಿತ್ತು.
ಗೋ ರಕ್ಷಣೆ ಹೆಸರಿನಲ್ಲಿ ದಾಳಿಗೆ ಒಳಗಾದವರಿಗೆ ರಾಜ್ಯ ಸಕರ್ಾರಗಳು ಸೂಕ್ತ ಪರಿಹಾರ ನೀಡಬೇಕೆಂದು ಸುಪ್ರೀಂಕೋಟರ್್ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರ ಅವರಿದ್ದ ನ್ಯಾಯಪೀಠ ಆದೇಶಿಸಿತ್ತು. ಜಾನುವಾರು ಸಾಗಣೆಯನ್ನು ಗುರಿಯಾಗಿಸಿಕೊಂಡು ಹೆದ್ದಾರಿಗಳಲ್ಲಿ ನಡೆಯುವ ದಾಳಿಗಳನ್ನು ತಡೆಯಲು ರಾಜ್ಯ ಸಕರ್ಾರಗಳು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂಬ ಬಗ್ಗೆಯೂ ವರದಿ ಸಲ್ಲಿಸಲು ನ್ಯಾಯಪೀಠ ಸೂಚನೆ ನೀಡಿತ್ತು. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries