HEALTH TIPS

ಯಾವುದೇ ಶೀರ್ಷಿಕೆಯಿಲ್ಲ

              ಕಾಟುಕುಕ್ಕೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ
    ಪೆರ್ಲ: ಕಾಟುಕುಕ್ಕೆಯ ಸುಬ್ರಹ್ಮಣ್ಯೇಶ್ವರ ಮಹಿಳಾ ಮಂಡಳಿ ಹಾಗೂ ಕೌಮುದಿ ಗ್ರಾಮೀಣ ನೇತ್ರಾಲಯ ಬೇಳ ಇದರ ಸಹಯೋಗದೊಂದಿಗೆ ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ  ಉಚಿತ ನೇತ್ರ ತಪಾಸಣಾ ಶಿಬಿರ ಇತ್ತೀಚೆಗೆ ನಡೆಯಿತು.
   ಶಿಬಿರವನ್ನು ಕಾಟುಕುಕ್ಕೆ ಶಾಲಾ ಪ್ರಬಂಧಕ ಮಿತ್ತೂರು ಪುರುಷೋತ್ತಮ ಭಟ್ ಉದ್ಘಾಟಿಸಿ ಸಂಘಟಕರ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸಂಜೀವ ರೈ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಪ್ರಾಂಶುಪಾಲ ಪದ್ಮನಾಭ ಶೆಟ್ಟಿ, ಗ್ರಾ.ಪಂ. ಸದಸ್ಯೆ ಮಲ್ಲಿಕಾ ಜೆ.ರೈ ಕಾರ್ಯಕ್ರಮಕ್ಕೆ ಶುಭಕೋರಿದರು. ಸುಬ್ರಹ್ಮಣ್ಯೇಶ್ವರ ಮಹಿಳಾ ಸಂಘದ ಅಧ್ಯಕ್ಷೆ, ಅಧ್ಯಾಪಿಕೆ ವಾಣಿ ಗೋಪಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೌಮುದಿ ಗ್ರಾಮೀಣ ನೇತ್ರಾಲಯದ ಡಾ.ಸುನಿಲ್ ತಪಾಸಣೆಯ ನೇತೃತ್ವ ವಹಿಸಿದ್ದರು. ಸಂಚಾಲಕ ಕೃಷ್ಣನ್ ಉಪಸ್ಥಿತರಿದ್ದರು. ಅರುಣಲತಾ ಶಿವರಾಮ ಸ್ವಾಗತಿಸಿ, ಕಾರ್ಯದಶರ್ಿ ಶಾಲಿನಿ ಎನ್. ರೈ ವಂದಿಸಿದರು. ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು. ಸುಮಾರು ನೂರಕ್ಕೂ ಮಿಕ್ಕಿ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದರು.
 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries