HEALTH TIPS

No title

                   ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದಿಂದ ನಿವೃತ್ತರಾಗುವ ಶಿಕ್ಷಕರಿಗೆ ಬೀಳ್ಕೊಡುಗೆ
                ಕನ್ನಡ ಭಾಷೆ , ಸಂಸ್ಕೃತಿ ಉಳಿಸಲು ಎಲ್ಲರೂ ಕಟಿಬಧ್ಧರಾಗಿರಬೇಕು:ಡಾ.ವಸಂತಕುಮಾರ ಪೆರ್ಲ
    ಕುಂಬಳೆ:ಕನ್ನಡ ಸಂಸ್ಕೃತಿ ಉಳಿದರೆ ಮಾತ್ರವೇ ಭಾಷೆ ಉಳಿಯಲು ಸಾಧ್ಯ.ಕಾಸರಗೋಡು ಜಿಲ್ಲೆಯಲ್ಲಿರುವ ಎಲ್ಲಾ ಕನ್ನಡ ಅಧ್ಯಾಪಕರೂ,ಕನ್ನಡಿಗರು ಕನ್ನಡ ಸಂಸ್ಕೃತಿಯನ್ನು ಸಾರುವ,ಪರಿಪೋಷಿಸುವ ಕಾರ್ಯಕ್ರಮಗಳನ್ನು ಆಚರಿಸುವುದರ ಮೂಲಕ ಯುವ ತಲೆಮಾರಿಗೆ ಕನ್ನಡದ ಮೇಲೆ ಪ್ರೀತಿ ಮೂಡುವಂತೆ ಮಾಡಬೇಕು.ಗಡಿನಾಡು ಕಾಸರಗೋಡಿನಲ್ಲಿ ಕನ್ನಡದ ಕಂಪು ಶಾಶ್ವತವಾಗಿ ಉಳಿಯುವಂತೆ ಮಾಡಬೇಕು.ಕನ್ನಡದ ಸಂರಕ್ಷಣೆಗಾಗಿ ಎಲ್ಲರೂ ಕಟಿಬಧ್ಧರಾಗಬೇಕೆಂದು ಕವಿ,ಸಾಹಿತಿ,ಮಾಧ್ಯಮ ತಜ್ಞ ಡಾ.ವಸಂತಕುಮಾರ ಪೆರ್ಲ ಹೇಳಿದರು.
   ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸೇವೆಯಿಂದ ನಿವೃತ್ತರಾಗುವ ಕನ್ನಡ ಮಾಧ್ಯಮ ಅಧ್ಯಾಪಕರಿಗೆ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಆಶ್ರಯದಲ್ಲಿ ನಡೆದ ವಿದಾಯ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
   ಅಧ್ಯಾಪಕರಿಗೆ ನಿವೃತ್ತಿ ಎಂಬುದಿಲ್ಲ ಔದ್ಯೋಗಿಕ ಜೀವನದಿಂದ ವಿರಮಿಸಿದ ಬಳಿಕ ಕನ್ನಡ ಸೇವೆ,ಸಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.
   ಕಾಸರಗೋಡಿನ ಕನ್ನಡ ಅಧ್ಯಾಪಕ ಭವನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಾಪಕರ ಸಂಘದ ಅಧ್ಯಕ್ಷ ರವೀಂದ್ರನಾಥ್ ಕೆ ಆರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಸತ್ಯನಾರಾಯಣ ಕೆ., ಕಾಸರಗೋಡು ಉಪಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸ ಮೂತರ್ಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.  ಅಧ್ಯಾಪಕರ ಸಂಘದ ಪ್ರಧಾನ ಕಾರ್ಯದಶರ್ಿ ಕುಮಾರ ಸುಬ್ರಹ್ಮಣ್ಯ ಸ್ವಾಗತಿಸಿ, ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries