HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಮುಗಿದ ಡ್ರಾಮಾ- ರಾಜ್ಯಪಾಲರಿಂದ ಆಹ್ವಾನ-ಇಂದು ಬೆಳಿಗ್ಗೆ  9.30ಕ್ಕೆ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ
    ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸಕರ್ಾರ ರಚಿಸಲು ಅಧಿಕೃತ ಆಹ್ವಾನ ನೀಡುವುದರೊಂದಿಗೆ ಕನರ್ಾಟಕ ರಾಜಕೀಯದ ಡ್ರಾಮಾದ ಮೊದಲ ಅಂಕ ಕೊನೆಗೊಳ್ಳುವ ಸೂಚನೆ ಲಭಿಸಿದೆ.
   ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿಎಸ್ ಯಡಿಯೂರಪ್ಪ ಅವರಿಗೆ ನೂತನ ಸಕರ್ಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದು, ಹದಿನೈದು ದಿನಗಳಲ್ಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸೂಚಿಸಿದ್ದಾರೆ.
   ಇದೇ ವೇಳೆ ದೆಹಲಿಯಲ್ಲಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬುಧವಾರ ಸುದ್ದಿಗೋಷ್ಟಿ ನಡೆಸಿ ಇದನ್ನು ಖಚಿತಪಡಿಸಿದ್ದಾರೆ.
ದೇಶದಲ್ಲೇ ಅತಿ ಹೆಚ್ಚು ರಾಷ್ಟ್ರಪತಿ ಆಳ್ವಿಕೆ ಹೇರಿದ್ದು ಕಾಂಗ್ರೆಸ್ ಎಂದು ವಿರೋಧ ಪಕ್ಷದ ವಿರುದ್ಧ ಕಿಡಿ ಕಾರಿದ ಸಚಿವರು ಬೊಮ್ಮಾಯಿ ಪ್ರಕರಣ ಉಲ್ಲೇಖಿಸಿ ತಮ್ಮ ನಡೆಯನ್ನು ಸಮಥರ್ಿಸಿಕೊಂಡಿದ್ದಾರೆ.
   ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ನಾಯಕರು ಸಕರ್ಾರ ರಚನೆಯ ಹಕ್ಕು ಮಂಡಿಸಿದ್ದರು. ಈ ಕುರಿತು ರಾಜ್ಯಪಾಲರು ಸುಪ್ರೀಂ ಕೋಟರ್್ ವಕೀಲರಿಬ್ಬರ ಸಲಹೆಯನ್ನು ಪಡೆದಿದ್ದು, ಅಂತಿಮವಾಗಿ ಅತೀ ಹೆಚ್ಚು ಸ್ಥಾನ ಗಳಿಸಿದ ಪಕ್ಷಕ್ಕೆ ಅವಕಾಶ ನೀಡಿದ್ದಾರೆ.
  ಇದಕ್ಕೆ ಮುನ್ನ, ಯಡಿಯೂರಪ್ಪ ಅವರು ಇಂದು ಬೆಳಗ್ಗೆ 9.30ಕ್ಕೆ ರಾಜಭವನದಲ್ಲಿ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂತಸದ ಕ್ಷಣದಲ್ಲಿ ಎಲ್ಲರೂ ಭಾಗಿಯಾಗಿ ಎಂದು ಬಿಜೆಪಿ ನಾಯಕ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿ.ಕೇವಲ ನಾಲ್ಕು ನಿಮಿಷದಲ್ಲಿ ಡಿಲೀಟ್ ಮಾಡಿ ಗೊಂದಲ ಉಂಟುಮಾಡಿದ ವಿದ್ಯಮಾನವೂ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries