HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                      ಕಚ್ಛಾ ತೈಲ ದರ ಕುಸಿತ, ಶೀಘ್ರ ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ
       ನವದೆಹಲಿ: ಗಗನಕ್ಕೇರಿದ್ದ ತೈಲದರ ಇಳಿಕೆಯಾಗುವ ಮುನ್ಸೂಚನೆ ನೀಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದರದಲ್ಲಿ ಇಳಿಕೆ ಕಂಡುಬಂದಿದೆ.
   ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆ ಇದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದರದಲ್ಲಿ ಇಳಿಕೆ ಕಂಡುಬಂದಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಜಾಗತಿಕ ಕಚ್ಚಾ ತೈಲ ದರದಲ್ಲಿ ಕಳೆದ 9 ದಿನಗಳಲ್ಲಿ ಬ್ಯಾರೆಲ್ಗೆ 7 ಡಾಲರ್ ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
  ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಗುರುವಾರ ಪ್ರತಿ ಲೀಟರ್ಗೆ 6 ಪೈಸೆ ಹಾಗೂ 12 ಪೈಸೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀ.ಗೆ 79.30 ರೂ. ಹಾಗೂ ಡೀಸೆಲ್ ದರ 70.56 ರೂ. ಇತ್ತು. ಸಾರ್ವಜನಿಕ ತೈಲ ಕಂಪನಿಗಳು ಅಂತಾರಾಷ್ಟ್ರೀಯ ತೈಲ ದರವನ್ನು ಅವಲಂಬಿಸಿ, ದೇಶೀಯ ದರಗಳನ್ನು ನಿರ್ಧರಿಸುತ್ತವೆ.
   ತೈಲೋತ್ಪಾದಕ ರಾಷ್ಟ್ರಗಳು ಉತ್ಪಾದನೆಯನ್ನು ಹೆಚ್ಚಿಸಿರುವುದು ದರ ಇಳಿಕೆಗೆ ಮೊದಲ ಕಾರಣವಾದರೆ, ಅಮೆರಿಕ ಹಾಗೂ ಚೀನಾ ನಡುವಣ ವಾಣಿಜ್ಯ ಸಮರ ತೈಲದ ಬೇಡಿಕೆಯನ್ನು ತಗ್ಗಿಸಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಕೂಡ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಜತೆಗೆ ಅಮೆರಿಕ ಕೂಡ ಭಾರತ ಹಾಗೂ ಇತರ ಕೆಲ ರಾಷ್ಟ್ರಗಳಿಗೆ ಇರಾನ್ ನಿಂದ ತೈಲ ಆಮದನ್ನು ಮಾಡಿಕೊಳ್ಳಲು ಯಾವುದೇ ಅಡ್ಡಿ ಮಾಡದಿರುವ ನಿರೀಕ್ಷೆ ಉಂಟಾಗಿದೆ. ಸೌದಿ ಅರೇಬಿಯಾ, ರಷ್ಯಾ ಹಾಗೂ ಅಮೆರಿಕ ತೈಲೋತ್ಪಾದನೆ ಹೆಚ್ಚಿಸುವ ಸಾಧ್ಯತೆ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries