HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                      ಕಾಸರಗೋಡು ದಸರಾ, ಯಕ್ಷಗಾನ ತರಬೇತಿ ಉದ್ಘಾಟನೆ
                ಯಕ್ಷಗಾನವನ್ನು ಉಳಿಸಿ ಬೆಳೆಸಲು ಕಟಿಬದ್ಧರಾಗೋಣ : ವೆಂಕಟ್ರಮಣ ಹೊಳ್ಳ
    ಕಾಸರಗೋಡು: ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ಕೋಟೆಕಣಿಯ ಶ್ರೀ ರಾಮನಾಥ ಭವನ ಸಮಿತಿಯ ಆಶ್ರಯದಲ್ಲಿ ಕನರ್ಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದೊಂದಿಗೆ ನಡೆಯುವ 20 ದಿನಗಳ ಯಕ್ಷಗಾನ ತರಗತಿ ಮತ್ತು ಕಾಸರಗೋಡು ದಸರಾ ಕಾರ್ಯಕ್ರಮದ ಉದ್ಘಾಟನೆಯನ್ನು ಯಕ್ಷಗಾನ ಕಲಾವಿದ, ಧಾಮರ್ಿಕ ಮುಂದಾಳು ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರು ಚೆಂಡೆ ಬಾರಿಸುವ ಮೂಲಕ ನೆರವೇರಿಸಿದರು.
   ಆ ಬಳಿಕ ಮಾತನಾಡಿದ ಅವರು ಧಾಮರ್ಿಕ ಚಿಂತನೆ, ಮಹಾಭಾರತ, ರಾಮಾಯಣ ಮೊದಲಾದವುಗಳ ಮೌಲ್ಯಗಳನ್ನು ತಿಳಿಯಪಡಿಸುವ ಗಂಡು ಮೆಟ್ಟಿನ ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸಲು ಕಟಿಬದ್ಧರಾಗೋಣ. ಈ ನಿಟ್ಟಿನಲ್ಲಿ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಆಯೋಜಿಸಿದ ಯಕ್ಷಗಾನ ತರಬೇತಿ ಕಾರ್ಯಕ್ರಮ ಶ್ಲಾಘನೀಯ ಎಂದರು.
   ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕ, ಯಕ್ಷಗಾನ ಅಧ್ಯಯನ ಕೇಂದ್ರದ ಸಂಚಾಲಕ ಡಾ.ರತ್ನಾಕರ ಮಲ್ಲಮೂಲೆ ಅವರು ಮಾತನಾಡಿ ಅನುಷ್ಠಾನ ಕಲೆಯೂ, ಶಾಸ್ತ್ರೀಯ ಕಲೆಯೂ ಆಗಿರುವ ಯಕ್ಷಗಾನ ತರಬೇತಿಯ ಮೂಲಕ ಯುವ ಜನಾಂಗದಲ್ಲಿ ಯಕ್ಷಗಾನದ ಅಭಿರುಚಿಯನ್ನು ಬೆಳೆಸಲು ಸಾಧ್ಯ. ಅಲ್ಲದೆ ಯಕ್ಷಗಾನದ ಸೂಕ್ಷ್ಮ ವಿಚಾರಗಳನ್ನು ಕಲಿತುಕೊಳ್ಳಲು ಸಾಧ್ಯವಾಗುವುದು. ಯಕ್ಷಗಾನ ಕಲಿಕೆಯಿಂದ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದರು.
    ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕನರ್ಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಾಮೋದರ ಶೆಟ್ಟಿ ಅವರು ಮಾತನಾಡಿ ಇತ್ತೀಚೆಗಿನ ಕೆಲವು ವರ್ಷಗಳಿಂದ ಯುವಜನರು ಯಕ್ಷಗಾನದ ಬಗ್ಗೆ ಒಲವು ತೋರಿಸುತ್ತಿರುವುದು ಸಂತೋಷದಾಯಕ. ಯಕ್ಷಗಾನ ಪರಂಪರೆಯನ್ನು ಉಳಿಸಲು ಶ್ರದ್ಧೆ ಮತ್ತು ಅಧ್ಯಯನ ನಡೆಯಬೇಕಾದುದು ಅಗತ್ಯ ಎಂದರು.
   ಯಕ್ಷಗಾನ ಕಲಾವಿದ ಮುಕುಂದ ಅವರು ಮಾತನಾಡಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ನಿರಂತರವಾಗಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಯಕ್ಷಗಾನ ತರಬೇತಿ ಕೇಂದ್ರವನ್ನು ಆರಂಭಿಸುವಂತಾಗಲಿ ಎಂದರು. ಯಕ್ಷಗಾನ ತರಬೇತಿ ನೀಡಲಿರುವ ಖ್ಯಾತ ಯಕ್ಷಗಾನ ಕಲಾವಿದ ಜಯರಾಮ ಪಾಟಾಳಿ ಅವರು ಮಾತನಾಡಿ ಯಕ್ಷಗಾನ ಕುರಿತಾದ ಪರಂಪರೆಯನ್ನು ಉಳಿಸಲು ಅಕಾಡೆಮಿಗಳ ಮುಖಾಂತರ ಅಧ್ಯಯನ ನಡೆಯಬೇಕೆಂದರು.
   ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರು ಪ್ರಾಸ್ತಾವಿಕ ನುಡಿದರು. ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಅವರು ಸ್ವಾಗತಿಸಿ, ಕಾವ್ಯ ಕುಶಲ ವಂದಿಸಿದರು. ಯಕ್ಷಗಾನ ಕಲಾವಿದೆ ಲತಾ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಾವಂತ ಗಾಯಕ ದಿವಾಕರ ಪಿ.ಅಶೋಕನಗರ ಅವರು ಸಂಗೀತ ಕಾರ್ಯಕ್ರಮ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries