ಪೆರ್ಲ:ಉಕ್ಕಿನಡ್ಕ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ 31ನೇ ವಾಷರ್ಿಕೋತ್ಸವ ಭಾನುವಾರ ವಿವಿಧ ಧಾಮರ್ಿಕ, ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಬೆಳಗ್ಗೆ 8 ಗಂಟೆಗೆ ಗಣಪತಿ ಹವನ, ವಿವಿ ಭಜನಾ ಸಂಘಗಳಿಂದ ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆಯ ಬಳಿಕ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಸಂಜೆ ತಾಯಂಬಕ, ರಾತ್ರಿ ಪುಟಾಣಿ ಮಕ್ಕಳಿಂದ ದೀಪಗಳ ಆರತಿ,ಅಯ್ಯಪ್ಪ ಸ್ವಾಮಿ ವ್ರತಧಾರಿಗಳ ಶರಣು ಮಂತ್ರ, ನೃತ್ಯಗಳೊಂದಿಗೆ ಉಲ್ಪೆ ಮೆರವಣಿಗೆ, ರಾತ್ರಿ ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನದಾನದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಪ್ರಯುಕ್ತ ಬಜ್ಪೆ ಶೀ ಅಂಬಿಕಾ ಅನ್ನಪೂಣರ್ೇಶ್ವರಿ ಯಕ್ಷಗಾನ ಮಂಡಳಿ ಸುಂಕದಕಟ್ಟೆ ತಂಡದರಿಂದ 'ಅಮರ ಶಿಲ್ಪಿ ವೀರ ಶಂಭು ಕಲ್ಕುಡ' ತುಳು ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.





