ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಾಲಯದಲ್ಲಿ ವರ್ಷಂಪ್ರತಿ ಕಾತರ್ಿಕ ಮಾಸದಲ್ಲಿ ಜರಗುವ ಕಾತೀಕ ಪೂಜೆ ನ.19ರಂದು ರಾತ್ರಿ 8 ಗಂಟೆಯಿಂದ ವಿಶೇಷ ದೀಪಾಲಂಕಾರ ಸಹಿತ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ನ.20 ರಂದು ಮಧ್ಯಾಹ್ನ 12.30 ರಿಂದ ಮಹಾಪೂಜೆ, ಅನ್ನಸಂತರ್ಪಣೆ, ಮಂತ್ರಾಕ್ಷತೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಶ್ರೀ ಮಹಾದೇವಿ ಮಹಿಳಾ ಭಜನಾ ಸಂಘ ಕಳತ್ತೂರು ಅವರಿಂದ ಶ್ರೀ ಕ್ಷೇತ್ರ ಸನ್ನಿಧಿಯಲ್ಲಿ ಭಜನಾ ಸಂಕೀರ್ತನೆ ನಡೆಯುವುದು.




