HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಬೆಳಕಿನ ಹಬ್ಬ ದೀಪಾವಳಿಯ ವಿಶೇಷ-ಸಮರಸ ವಿಶೇಷಬರಹ: ದೀಪಾವಳಿ ಹಬ್ಬವನ್ನು ಆಶ್ವಯುಜ ಮಾಸದ ಕೃಷ್ಣ ಪಕ್ಷದಲ್ಲಿ ಆಚರಿಸುತ್ತೀವಿ. ದೀಪಾವಳಿ ಅಂದರೆ 3-4 ದಿನದ ಹಬ್ಬ. ತ್ರಯೋದಶಿ ದಿನ - ನೀರು ತುಂಬುವ ಹಬ್ಬ ಚತುರ್ದಶಿ ದಿನ - ನರಕ ಚತುರ್ದಶಿ ಅಮಾವಾಸ್ಯೆ ದಿನ - ಧನ ಲಕ್ಷ್ಮೀ ಪೂಜೆ ಪಾಡ್ಯ ದಿನ - ಬಲಿ ಪಾಡ್ಯಮಿ /ಬಲೀಂದ್ರನ ಪೂಜೆ ನೀರು ತುಂಬುವ ಹಬ್ಬ ಹೆಸರೇ ಹೇಳುವಂತೆ ನೀರನ್ನು ಸಂಗ್ರಹಿಸುವ ದಿನ. ಈ ದಿನ ಸ್ನಾನದ ಮನೆ, ಬಚ್ಚಲನ್ನು ಸ್ವಚ್ಛಮಾಡಿ, ಮಾರನೆಯ ದಿನದ ಅಭ್ಯಂಜನಕ್ಕೆ ನೀರು ಹಿಡಿದು ಇಡುತ್ತಾರೆ. ಕೊಳೆಯನ್ನು ಹೋಗಿಸಿ ಮನೆಯನ್ನು ಶುಭ್ರಮಾಡುವಂತೆ , ನಮ್ಮ ಮನಸಿನಲ್ಲಿರುವ ಕೆಟ್ಟ ವಿಷಯಗಳನ್ನು ತೊಲಗಿಸಿ ನಿರ್ಮಲವಾಗಿ ಇಟ್ಟುಕೊಳ್ಳಿ ಎಂಬ ಸಂಕೇತ ಇರಬಹುದು. ಹಿಂದಿನ ಕಾಲದಲ್ಲಿ ತುಂಬಿದ ಸಂಸಾರ, ಮನೆಯಲ್ಲಿ ಬಹಳ ಜನ ಇರುತ್ತಿದ್ದರು. ಎಲ್ಲರೂ ಒಂದೇ ದಿನ ಅಭ್ಯಂಜನ ಮಾಡಬೇಕಾದರೆ ಸಾಕಷ್ಟು ನೀರು ಮೊದಲೇ ಶೇಖರಿಸಿ ಇಡಬೇಕಿತ್ತು.ಹೀಗಾಗಿ ಈ ದಿನ ನೀರುಹಿಡಿಯುವುದರಲ್ಲೇ ಕಳೆದು ಹೋಗುತ್ತಿತ್ತು ಅನ್ನಿಸುತ್ತದೆ.ಅದಕ್ಕೆ ಈ ದಿನವನ್ನು ನೀರು ತುಂಬುವ ಹಬ್ಬವೆಂದು ಆಚರಿಸುವ ವಾಡಿಕೆ ಬಂತೇನೋ.ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೆ. ನರಕ ಚತುರ್ದಶಿ ದಿನ ಬೆಳಿಗ್ಗೆ ಮನೆಯವರೆಲ್ಲ ಎಣ್ಣೆ ಶಾಸ್ತ್ರ ಮಾಡಿ ಅಭ್ಯಂಜನ ಸ್ನಾನ ಮಾಡುವ ಪದ್ಧತಿ. ಶ್ರೀ ಕೃಷ್ಣನು ನರಕಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದ ನೆನಪಿನ ದಿನ. ಈ ವಿಜಯವನ್ನು ಆಚರಿಸುತ್ತೀವಿ. ಈ ದಿನ ವಿಶೇಷವಾದ ಪೂಜೆ ಅಂತೇನು ಇಲ್ಲ. ಪ್ರತಿದಿನದಂತೆ ದೇವರ ಪೂಜೆ ಅಷ್ಟೆ. ಮಾರನೆಯ ದಿನ ಅಮಾವಾಸ್ಯೆ. ಧನಲಕ್ಷ್ಮೀ ಪೂಜೆ ಅಮಾವಾಸ್ಯೆ ದಿನ ಮಾಡುತಾರೆ. ಈ ಪೂಜೆಯನ್ನು ಸಾಯಂಕಾಲ ಮಾಡಬೇಕು. ದೇವರ ಮನೆ ಅಥವಾ ಪೂಜೆ ಮಾಡುವ ಸ್ಥಳವನ್ನು ರಂಗೋಲಿ ಹಾಕಿ ಅಲಂಕರಿಸಿ. ಲಕ್ಷ್ಮಿ ದೇವಿ ಫೋಟೋ , ಬೆಳ್ಳಿ ವಿಗ್ರಹ /ಪ್ರತಿಮೆ ಇಟ್ಟುಕೊಳ್ಳಿ. ಇದರ ಜೊತೆಗೆ ನಿಮ್ಮ ಮನೆಯಲ್ಲಿರುವ ದುಡ್ಡು/ಕಾಸು/ನಾಣ್ಯಗಳು ಮತ್ತು ವಡವೆ/ಆಭರಣಗಳನ್ನೂ ದೇವರ ಜೊತೆ ಇಟ್ಟು ಪೂಜೆ ಮಾಡಿ. ಮೊದಲು ಗಣಪತಿ ಪೂಜೆ, ನಂತರ ಮಹಾಲಕ್ಷ್ಮಿ ಪೂಜೆ. ಪೂಜಾ ವಿಧಾನ ಇಲ್ಲಿದೆ.ಪೂಜಾ ಸಾಮಗ್ರಿಗಳ ವಿವರ ಇಲ್ಲಿದೆ. ಲಕ್ಷ್ಮೀ ಅಷ್ಟೂತ್ತರ ಇಲ್ಲಿದೆ. ಯಾವುದಾದರು ಸಿಹಿ ತಿಂಡಿ ಮಾಡಿ, ದೇವಿಗೆ ನೈವೇದ್ಯ ಮಾಡಿ. ಪೂಜೆಯ ನಂತರ ಇದನ್ನು ಪ್ರಸಾದವಾಗಿ ಸ್ವೀಕರಿಸಿ. ಸಕಲ ಐಶ್ವರ್ಯ ಸಂಪತ್ತನ್ನು ಕರುಣಿಸಿ ಎಂದು ಭಕ್ತಿಯಿಂದ ಲಕ್ಷ್ಮಿಯನ್ನು ಪ್ರಾಥರ್ಿಸಿ. ಅಮಾವಾಸ್ಯೆ ಮಾರನೆಯ ದಿನ ಕಾತರ್ಿಕ ಮಾಸದ ಪಾಡ್ಯ/ಪ್ರತಿಪತ್ . ಈ ದಿನ ಬಲಿ ಪಾಡ್ಯಮಿ ಹಬ್ಬ. ಬಲಿ ಚಕ್ರವತರ್ಿಯು ಭೂಲೋಕ ಆಳುತ್ತಿದ್ದ ರಾಜ. ವಿಜಯಶಾಲಿಯಾದ ರಾಜನು ದೇವಲೋಕವನ್ನೂ ಗೆದ್ದುಕೊಂಡು ತನ್ನದಾಗಿಸಿಕೊಂಡನು. ಇದರಿಂದ ಇಂದ್ರಾದಿ ದೇವತೆಗಳು ದೇವಲೋಕವನ್ನು ಬಿಡುವಂತಾಯಿತು. ಅವರು ವಿಷ್ಣುವಿನಲ್ಲಿ ಮೊರೆ ಹೋದರು. ಆಗ ಶ್ರೀ ವಿಷ್ಣು ವಾಮನ ಅವತಾರ ತಾಳಿ ಬಲಿಯ ಬಳಿ ಬಂದು, ತನಗೆ 3 ಹೆಜ್ಜೆ ಇಡುವಷ್ಟು ಜಾಗ ಕೊಡು ಎಂದು ಕೇಳಿದನು. ಒಂದು ಹೆಜ್ಜೆಯಿಂದ ಭೂಲೋಕವೆಲ್ಲ ಮುಚ್ಚಿತು, ಇನ್ನೊಂದು ಹೆಜ್ಜೆಯಿಂದ ಆಕಾಶವೆಲ್ಲ ಮುಚ್ಚಿ ಹೋಯಿತು. ಮೂರನೆಯ ಹೆಜ್ಜೆ ಎಲ್ಲಿ ಇಡಲಿ ಎಂದು ವಾಮನ ಕೇಳಲು, ಬಲಿಯು ನನ್ನ ತಲೆ ಮೇಲೆ ಇಡು ಎಂದನು. ಹೀಗ ವಿಷ್ಣುವು ಬಲಿಯ ತಲೆಯನ್ನು ಮೆಟ್ಟಿ ಅವನನ್ನು ಪಾತಾಳಕ್ಕೆ ತುಳಿದನು. ಬಲಿಯ ಧರ್ಮ ನಿಷ್ಠೆಯನ್ನು ಮೆಚ್ಚಿ ವಿಷ್ಣುವು ಅವನಿಗೆ ಪಾತಾಳದ ಅಧಿಪತ್ಯ ಕೊಟ್ಟನು. ಜೊತೆಗೆ ವರುಷಕ್ಕೆ ಒಂದು ದಿನ ಭೂಲೋಕಕ್ಕೆ ಮರಳಿ ಬಂದು, ಭೂಲೋಕವನ್ನು ಆಳುವಂತೆ ಅನುಗ್ರಹಿಸಿದನು. ಇದೆ ಬಲಿಪಾಡ್ಯಮಿ. ಈ ದಿನ ಗೊಪೂಜೆಯೂ ನಡೆಯುತ್ತದೆ. ಮನೆಯಲ್ಲಿ ಬೆಳ್ಳಿ ಕೃಷ್ಣ, ಬೆಳ್ಳಿ ಹಸು ಪ್ರತಿಮೆಗಳಿಗೆ ಪೂಜೆ ಮಾಡುತ್ತಾರೆ. ಕೆಲವರ ಮನೆಯಲ್ಲಿ ಕೆರಕ ಇಟ್ಟು ಪೂಜೆ ಮಾಡುತ್ತಾರೆ. ಕೆರಕ ಎಂದರೆ ಹಸುವಿನ ಸಗಣಿಯ ಉಂಡೆಗೆ ಚೆಂಡುಹೂವು ಇಡುತ್ತಾರೆ. ಇದು ಗಣಪತಿಯ ಸ್ವರೂಪ ಎಂದು ಭಾವಿಸುತ್ತಾರೆ. ಬಲಿ ಚಕ್ರವತರ್ಿಯ ರಾಜ್ಯವು ಐಶ್ವರ್ಯ, ಅಭಿವೃದ್ಧಿ ಹೊಂದಿತ್ತು. ಅಂತಯೇ ನಮ್ಮ ಬಾಳಲ್ಲೂ ಲಕ್ಷ್ಮೀ ಸ್ಥಿರವಾಗಿ ನೆಲಿಸಿ, ಅಭಿವೃದ್ಧಿ ಸಿಗಲಿ ಎಂದು ಪ್ರಾರ್ಥನೆ ಮಾಡುವ ಪದ್ಧತಿ. ದೀಪಾವಳಿ ಹಬ್ಬದಲ್ಲಿ ನೇಮ, ಉಪವಾಸ, ವ್ರತ ಕಥೆ ಇವ್ಯಾವುದೂ ಇಲ್ಲ. ಹಾಗಾಗಿ ಇದು ಸಂತಸ, ಸಡಗರ, ಸಂಭ್ರಮದ ಹಬ್ಬ. ಬೆಳಿಗ್ಗೆ ಎದ್ದು ಅಭ್ಯಂಜನ ಸ್ನಾನ ಮಾಡಿ, ದೇವರ ಪೂಜೆ ಮಾಡಿ,ಹೊಸ ಉಡುಗೆ ಹಾಕಿಕೊಂಡು, ರುಚಿಯಾದ ಹಬ್ಬದ ಅಡಿಗೆ ಊಟ ಮಾಡಿ, ವಿಧ ವಿಧವಾದ ಪಟಾಕಿ ಹೊಡೆದು ಆನಂದಿಸುವ ಹಬ್ಬ ಇದು. ದೀಪಾವಳಿಯ ಬೆಳಕು ಎಲ್ಲರ ಬಾಳನ್ನೂ ಪ್ರಕಾಶಗೊಳಿಸಲಿ ಎಂದು ಆಶಿಸುವ. *ನೀರು ತುಂಬುವ ಹಬ್ಬದ ದಿನ ಏನು ಮಾಡಬೇಕು?* 1) ಹಂಡೆತುಂಬಿ ಕಾಯಿಸಿ ಸ್ನಾನ ಮಾಡುವ ಅನುಕೂಲ ಇದ್ದವರು ಅದನ್ನು ತಿಕ್ಕಿ ತೊಳೆದು ಅಲಂಕರಿಸಿ ಶುದ್ಧವಾದ ನೀರನ್ನು ಮುಕ್ಕಾಲು ಭಾಗ ತುಂಬಿ ಇಡಿ. 2) ಅನಂತರ ಬಾವಿ ಇದ್ದವರು ತಮ್ಮ ಮನೆಯ ಸಂಪ್ರದಾಯದಂತೆ ನೀರು ಸೇದಿ ತಂದು ಒಂದು ಕಲಶದಲ್ಲಿ ದೇವರ ಕೊಣೆಯೊಳಗೋ ಹೊರಗೋ ಶುದ್ಧವಾದ ಜಾಗದಲ್ಲೋ ಇಡಿ 3) ತಂಡುಲಾಕ್ಷತೆ, ಹೂವು, ಹಣ್ಣು , ಗಂಧ, ಅರಸಿಣ ಪುಡಿ, ಕುಂಕುಮ ಇತ್ಯಾದಿ ಸಿದ್ಧಪಡಿಸಿ. 4) ಮಂತ್ರಾಕ್ಷತೆ , ಹೂವು ಕೈಯಲ್ಲಿ ಹಿಡಿದು ನೀರು ತುಂಬಿದ ಕಲಶದಲ್ಲಿ ತನ್ನ ಅಂಗುಷ್ಟದಿಂದ ಗಂಗೆಗೆ ಜನ್ಮವಿತ್ತ ರಮಾಪತಿ ತ್ರಿವಿಕ್ರಮನನ್ನು ಅವಾಹಿಸಿ. *ಮಮ ಗುರ್ವಂತರ್ಗತ ವರುಣಾಂತರ್ಗತ ಭಾರತೀರಮಣ ಮುಖ್ಯಪ್ರಾಣಾಂತರ್ಗತ ಗಂಗಾಜನಕಂ ರಮಾಸಹಿತ ತ್ರಿವಿಕ್ರಮಂ ಆವಾಹಯಾಮಿ. ಪ್ರಸೀದ ಪ್ರಸೀದ ಭಗವನ್ ಆಗಚ್ಛ ಆಗಚ್ಛ* ಎಂದು ಕಲಶದಲ್ಲಿ ಹೂವು ಅಕ್ಷತೆ ಹಾಕಿ. ನಂತರ ಆಸನ, ಅಘ್ರ್ಯ, ಪಾದ್ಯ, ಆಚಮನ, ಮಧುಪರ್ಕ, ಸ್ನಾನ, ವಸ್ತ್ರ, ಯಜ್ನೋಪವೀತ, ಗಂಧ, ಪುಷ್ಪ, ಧೂಪ, ದೀಪ, ನೈವೇದ್ಯ, ತಾಂಬೂಲ, ಮಂಗಲಾರತಿ, ಮಂತ್ರಪುಷ್ಪ, ನಮಸ್ಕಾರ ಅಪರ್ಿಸಿ. 5) ನಂತರ ಅಕ್ಷತೆ ಹೂವು ಕೈಯಲ್ಲಿ ಹಿಡಿದುಕೊಂಡು ಕಲಶದಲ್ಲಿ ಗಂಗಾದೇವಿಯನ್ನು ಅವಾಹಿಸಿ. . *ಗಂಗೇ ಚ ಯಮುನೇ ಕೃಷ್ಣೇ ಗೋದಾವರೀ ಸರಸ್ವತೀ*| *ನರ್ಮದೇ ಸಿಂಧು ಕಾವೇರೀ ಜಲೇ$ಸ್ಮಿನ್ ಸನ್ನಿಧಿಮ್ ಕುರು||* ಕಲಶಮಧ್ಯೆ ತ್ರಿವಿಕ್ರಮ ರೂಪಿಣಃ ಪುತ್ರಿಮ್ ಗಂಗಾಂ ಆವಾಹಯಾಮಿ ಎಂದು ಅಕ್ಷತೆ ಹೂವು ಹಾಕಿ ಮುಂದಿನ ಮಂತ್ರಗಳಿಂದಲೂ ಕಲಶದಲ್ಲಿ ಅಕ್ಷತೆ ಹಾಕಿ *ಭೂ: ಗಂಗಾಂ ಆವಾಹಯಾಮಿ, ಭುವಃ ಗಂಗಾಂ ಆವಾಹಯಾಮಿ, ಸ್ವ: ಗಂಗಾಂ ಆವಾಹಯಾಮಿ, ಭೂಭರ್ುವಸ್ವ: ಗಂಗಾಂ ಆವಾಹಯಾಮಿ.* ಆ ನಂತರ ಮೇಲೆ ಹೇಳಿದಂತೆ ಅಸನದಿಂದ ವಸ್ತ್ರವನ್ನು ಅಪರ್ಿಸಿ ಹರಿದ್ರಾ, ಕುಂಕುಮ, ಗಂಧ , ಪುಷ್ಪ ಅಪರ್ಿಸಿ 6) ಈ ಕೆಳಗಿನ ನಾಮಗಳಿಂದ ಅಕ್ಷತೆ ಹಾಕಿ *ನಂದಿನ್ಯೈ ನಮಃ, ನಲಿನ್ಯೆ ನಮಃ, ಸೀತಾಯೈ ನಮಃ , ಮಾಲತ್ಯೈ ನಮಃ , ಮಲಾಪಹಾಯೈ ನಮಃ, ವಿಷ್ಣುಪಾದಾಬ್ಜ ಸಂಭೂತಾಯೈ ನಮಃ, ಗಂಗಾಯೈ ನಮಃ, ತ್ರಿಪಥಗಾಮಿನ್ಯೈ ನಮಃ , ಭಾಗೀರಥ್ಯೈ ನಮಃ, ಭೋಗವತ್ಯೈ ನಮಃ, ಜಾಹ್ನವ್ಯೈ ನಮಃ, ತ್ರಿದಶೇಶ್ವಯರ್ೈ ನಮಃ, ಗಂಗಾಭಾಗೀರಥ್ಯೆ ನಮಃ* 7) ಧೂಪವನ್ನು ತೋರಿಸಿ *ವನಸ್ಪತ್ಯುದ್ಭವೋ ದಿವ್ಯೋ ಗಂಧಾಢ್ಯೋ ಗಂಧ ಉತ್ತಮಃ* | *ಆಘ್ರೇಯಃ ಸರ್ವದೇವಾನಾ0 ಧೂಪೋ$ಯಂ ಪ್ರತಿಗೃಹ್ಯತಾಮ್* || 8) *ಸಾಜ್ಯ0 ತ್ರಿವತರ್ಿಸಂಯುಕ್ತ0 ವಹ್ನಿನಾ ದ್ಯೋತಿತಂ ಮಯಾ|* *ದೀಪಂ ಗೃಹಾಣ ದೇವೇಶ ತ್ರೈಲೋಕ್ಯತಿಮಿರಾಪಹ*|| ಎನ್ನುತ್ತಾ ಮೂರು ಬತ್ತಿಯ ಆರತಿ ತೋರಿಸಿ ನಂದಿಸಿ 9) ಹಣ್ಣು ಕಾಯಿ ಮತ್ತು ಅನುಕೂಲ ಇದ್ದಲ್ಲಿ ಇತರ ನೈವೇದ್ಯಗಳನ್ನು ಮೊದಲು ತ್ರಿವಿಕ್ರಮ ದೇವರಿಗೆ ಅಪರ್ಿಸಿ ಅನಂತರ ರಮಾದೇವಿ , ಮುಖ್ಯಪ್ರಾಣ ದೇವರಿಗೆ ಅಪರ್ಿಸಿ. ಇದರೊಳಗಿಂದ ಸ್ವಲ್ಪ ಬೇರೊಂದು ತಟ್ಟೆಯಲ್ಲಿ ಬಡಿಸಿ ಭಾಗೀರಥಿ ದೇವಿಗೆ ಅದನ್ನು ನಿವೇದಿಸಿ. 10) ತದನಂತರ ಕಪರ್ೂರ ಹಾಕಿ ಮಹಾಮಂಗಳಾರತಿ ಮೊದಲು ತ್ರಿವಿಕ್ರಮ ದೇವರು ನಂತರ ರಮಾದೇವಿ ಪ್ರಾಣದೇವರಿಗೆ ತೋರಿಸಿ ಭಾಗೀರಥಿಗೆ ತೋರಿಸಿ. 11) *ನಾರಾಯಣಾಯ ವಿದ್ಮಹೇ ವಾಸುದೇವಾಯ ದೀಮಹಿ ತನ್ನೋ ವಿಷ್ಣು: ಪ್ರಚೋದಯಾತ್* ಎನ್ನುತ್ತಾ ತ್ರಿವಿಕ್ರಮ ದೇವರಿಗೆ ಮಂತ್ರಪುಷ್ಪಾ0ಜಲಿ ಅಪರ್ಿಸಿ. 12) ಭಾಗೀರಥೀ ದೇವಿಯನ್ನು ಪ್ರಾಥರ್ಿಸಿ. *ಹೇ ಗಂಗೇ! ತವ ಕೋಮಲಾಂಘ್ರಿ* *ನಲಿನಂ ರಂಭೋರು ನೀವಿಲಸತ್* *ಕಾಂಚೀದಾಮ ತನೂದರಂ ಘನಕುಚ ವ್ಯಾಕೀರ್ಣಹಾರಂ ವಪು:* | *ಸನ್ಮುದ್ರಾ0ಗದ ಕಂಕಣಾವೃತಕರ0* *ಸ್ಮೇರಂ ಸ್ಫುರತ್ಕುಂಡಲಂ* *ಸಾರಂಗಾಕ್ಷಿ ಜಲಾನ್ಯದಿಂದುರುಚಯೇ ಜಾನಂತಿ ತೇ$ನ್ಯೇ ಜಲಾತ್ |* ಪ್ರಾರ್ಥನಾಂ ಸಮರ್ಪಯಾಮಿ ಎನ್ನುತ್ತ ಅಕ್ಷತೆ ಹಾಕಿ ನಮಸ್ಕರಿಸಿ. 13) ತದನಂತರ ಯಸ್ಯ ಸ್ಮೃತ್ಯಾ ಶ್ಲೋಕ ಹೇಳಿ ಅನೇನ ಅಸ್ಮದ್ ಗುರ್ವಂತರ್ಗತ ಭಾರತೀರಮಣ ಮುಖ್ಯಪ್ರಾಣಾ0ತರ್ಗತ ಗಂಗಾಜನಕ ಶ್ರೀರಮಾತ್ರಿವಿಕ್ರಮ ರೂಪಿ ಶ್ರೀಲಕ್ಷ್ಮೀನಾರಾಯಣ: ಪ್ರೀಯತಾಂ ಪ್ರೀತೋ ಭಾವತು ತತ್ ಸರ್ವಂ ಶ್ರೀಕೃಷ್ಣಾರ್ಪಣಾಮಸ್ತು ಎಂದು ಅಪರ್ಿಸಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries