ಕುಳೂರು ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ:
0
ನವೆಂಬರ್ 25, 2018
ಮಂಜೇಶ್ವರ: ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಾಡರ್್ ಸದಸ್ಯೆ ಚಂದ್ರಾವತಿ ವಿ.ಪಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್.ವಿ ಉಪಸ್ಥಿತರಿದ್ದರು. ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಚಿನಾಲ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಶಾಲಾ ಹಳೆ ವಿದ್ಯಾಥರ್ಿ ನಿಕ್ಷಿತ ಪೊಯ್ಯೆಲ್ ರವರನ್ನುಶಾಲು ಹೊದಿಸಿ, ಸ್ಮರಣಿಕೆಯೊಂದಿಗೆ ಪ್ರೋತ್ಸಾಹ ಧನವನ್ನು ನೀಡಿ ಅಭಿನಂದಿಸಲಾಯಿತು. ಬಳಿಕ ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ 'ಬದಲಾಗಬೇಕು' ಎಂಬ ವಿನೂತನ ನೃತ್ಯ ನಾಟಕ ಪ್ರದರ್ಶನಗೊಂಡಿತು.


