ಉಪ್ಪಳ: ಪೈವಳಿಕೆ ಗ್ರಾಮ ಪಂಚಾಯತ್ ಕುಟುಂಬಶ್ರೀ ಸಿಡಿಎಸ್ ಮಟ್ಟದಲ್ಲಿ ವನಿತಾ ಕ್ಯಾಂಟೀನ್ ಮತ್ತು ಊರಿನ ಸಂತೆ ಉದ್ಘಾಟನಾ ಸಮಾರಂಭ ನಡೆಯಿತು.
ಪೈವಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತೀ.ಜೆ.ಶೆಟ್ಟಿ ಉದ್ಘಾಟಿಸಿದರು. ಸಿಡಿಎಸ್ ಅಧ್ಯಕ್ಷೆ ಕದೀಜ ಅಧ್ಯಕ್ಷತೆ ವಹಿಸಿದರು. ಗ್ರಾ.ಪಂ. ಅಭಿವೃದ್ದಿ ಸ್ಥಾಯೀ ಸಮಿತಿ ಅಧ್ಯಕ್ಷ ಎಂ.ಕೆ.ಅಮೀರ್, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಫಾತಿಮ್ಮತ್ ಜೌರಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರ ನಾಯ್ಕ್ ಮಾಣಿಪ್ಪಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತಾ.ಬಿ.ರೈ, ತಾರಾ.ವಿ.ಶೆಟ್ಟಿ, ಭವ್ಯ, ಚನಿಯ ಕೊಮ್ಮಂಗಳ, ಗಣೇಶ, ರಾಭಿಯಾ, ಬಶೀರ್ ದೇವಕಾನ ಮೊದಲಾದವರು ಉಪಸ್ಥಿತರಿದ್ದರು.


