ಕಾಸರಗೋಡು: ಡಿಸೆಂಬರ್ 16 ರಂದು ಕಾಸರಗೋಡಿನಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದ ಅಂಗವಾಗಿ ನ.25 ರಂದು ಕೂಡ್ಲು ಶ್ರೀ ಗೋಪಾಲಕೃಷ್ಣ ಹೈಸ್ಕೂಲ್ನಲ್ಲಿ ನಡೆಯಲಿರುವ ಕಾಲೇಜು ವಿದ್ಯಾಥರ್ಿನಿ ಸಮಾವೇಶ ಹಾಗೂ ನ.26 ರಂದು ಕಾಸರಗೋಡು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಹಾಲ್ನಲ್ಲಿ ಜರಗಲಿರುವ ಮಾತೃ ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಮಧೂರು, ಮೊಗ್ರಾಲ್ ಪುತ್ತೂರು, ಕಾಸರಗೋಡು ನಗರದ ಹೆಚ್ಚಿನ ಸಂಖ್ಯೆಯಲ್ಲಿ ಮಾತೆಯರು, ವಿದ್ಯಾಥರ್ಿನಿಯರು ಸಮಾವೇಶದಲ್ಲಿ ಭಾಗವಹಿಸುವಂತೆ ಮಾಡಲು ಯೋಜನೆಗಳನ್ನು ಕೈಗೊಳ್ಳಲಾಯಿತು.
ನಗರ ಸಂಘಟಕರಾದ ಕೆ.ಟಿ.ಕಾಮತ್, ಹಿಂದೂ ಸಮಾಜೋತ್ಸವ ಸಮಿತಿ ಪ್ರಧಾನ ಕಾರ್ಯದಶರ್ಿ ಅಶೋಕ್ ಬಾಡೂರು, ಸಮಿತಿ ಸದಸ್ಯರಾದ ಎ.ಟಿ.ನಾಕ್, ಮಾತೃ ಸಮಿತಿ ಸದಸ್ಯರಾದ ಸವಿತಾ ಟೀಚರ್, ಗಣಪತಿ ಕೋಟೆಕಣಿ ಮೊದಲಾದವರು ಉಪಸ್ಥಿತರಿದ್ದರು.




