ಮಂಜೇಶ್ವರ: ಮೀಯಪದವು ಶ್ರೀವಿದ್ಯಾವರ್ಧಕ ಪೌಢ ಪ್ರಾಥಮಿಕ ಶಾಲೆಯ ವಾಷರ್ಿಕೋತ್ಸವವು ನ. 24. ರಂದು ಶನಿವಾರ ನಡೆಯಲಿದೆ.
ಕಾರ್ಯಕ್ರಮವನ್ನು ಬೆಳಿಗ್ಗೆ 9.ಕ್ಕೆ ಧ್ವಜಾರೋಹಣಗೈದು ಶಾಲಾ ಸಂಚಾಲಕಿ ರಾಜೇಶ್ವರಿ ಎಸ್.ರಾವ್ ನಿರ್ವಹಿಸಲಿರುವರು. 10 ಕ್ಕೆ ಶಾಲಾ ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು. ಬೆಳಿಗ್ಗೆ ಗಂಟೆ 11.ಕ್ಕೆ ಸಭಾ ಕಾರ್ಯಕ್ರಮ ಮಂಜೇಶ್ವರ ಉಪ ಜಿಲ್ಲಾ ವಿದ್ಯಾಧಿಕಾರಿ ದಿನೇಶ್.ವಿ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಾರಾಮ್ ರಾವ್ರವರು ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಎಂ.ಗೋಪಾಲಕೃಷ್ಣ ಭಟ್ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ವೇದಿಕೆಯಲ್ಲಿ ಶಾಲಾ ಸಂಚಾಲಕಿ ಎಂ.ರಾಜೇಶ್ವರಿ ಎಸ್.ರಾವ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ತಿಮ್ಮಪ್ಪ ಭಟ್, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸೌಮ್ಯ ಪ್ರಕಾಶ್, ಶಾಲಾ ಆಡಳಿತ ಸಲಹೆಗಾರರು ನಿವೃತ್ತ ಮುಖೋಪಧ್ಯಾಯರಾದ ಶ್ರೀಧರ್ ರಾವ್.ಆರ್.ಎಂ, ಶಾಲಾ ಮುಖ್ಯೋಪಾಧ್ಯಾಯ ಸುಧಾಕರ.ವಿ ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಂದುವರಿಯುವುದು.




