HEALTH TIPS

ಕಾತರ್ಿಕ ಮಾಸದ ಮಹತ್ವ

             
        ಪ್ರಸ್ತುತ ನಡೆಯುತ್ತಿರುವ ಕಾತರ್ಿಕ ಮಾಸದ ಮಹತ್ವದ ಬಗ್ಗೆ ಕಿರಣ್ ಕಲಾಂಜಲಿ ಬರೆಯುತ್ತಾರೆ......
           ಹಿಂದೂ ಪಂಚಾಂಗದ ಪ್ರಕಾರ 12 ಮಾಸಗಳಿವೆ. ಅದರಲ್ಲಿ ಕಾತರ್ಿಕ ಮಾಸವು ಬಹಳ ಶ್ರೇಷ್ಠ ಮಾಸವಾಗಿದೆ. ಈ ತಿಂಗಳನ್ನು ಶಿವನ ಮಾಸ ಎಂದೂ ಕರೆಯುತ್ತಾರೆ. ಈ ಮಾಸದಲ್ಲಿ ಪ್ರತಿಯೊಂದು ದಿನವೂ ವಿಶೇಷದಿಂದ ಕೂಡಿದೆ. ಈ ಮಾಸದಲ್ಲಿ ಶಿವನನ್ನು ಅವನ ಬೇರೆ ಬೇರೆ ನಾಮಗಳಿಂದ ಸಾಂಕೇತಕವಾಗಿ ಆರಾಧಿಸುತ್ತಾರೆ. ಈ ತಿಂಗಳು ಜ್ಞಾನಾರಾಧನೆಗೂ ಮತ್ತು ಮಂತ್ರಾ ದೀಕ್ಷಾ ಸ್ವೀಕಾರಕ್ಕೂ ಪ್ರಶಸ್ತವಾದದ್ದು. ಈ ಮಾಸದಲ್ಲಿ ನಾರಾಯಣನು ತನ್ನ ನಿದ್ರಾ ಮುದ್ರೆಯನ್ನು ಬಿಟ್ಟು ಎಚ್ಚರಿಕೆಹೊಂದುವ ಮುದ್ರೆಯನ್ನು ಭಕ್ತರಿಗೆ ತೋರಿಸುವನು ಎಂಬ ಪ್ರತೀತಿ ಇದೆ.
           ಕಾತರ್ಿಕ ಮಾಸ ಮನುಷ್ಯ ಮತ್ತು ದೇವರ ನಡುವಿನ ಸೂಕ್ಷ್ಮ ಪ್ರಜ್ಞೆಯ ಸೇತುವೆ*
  ದೀಪಾವಳಿಯ ನಂತರ ಕಾತರ್ಿಕ ಮಾಸವು ಶುರುವಾಗುತ್ತದೆ. ಸೂರ್ಯನು ದ್ವಾದಶ ರಾಶಿಗಳಲ್ಲಿ ಸಂಚರಿಸುತ್ತಾನೆ. ಪ್ರತಿಯೊಂದು ರಾಶಿಯಲ್ಲಿ ಸಂಚರಿಸುವಾಗ ತನ್ನದೇ ಆದ ಪ್ರಭಾವವನ್ನು ಪ್ರತ್ಯೇಕವಾಗಿ ಬೀರುತ್ತಾನೆ.
  ಕಾತರ್ಿಕ ಪೌರ್ಣಮಿಯಂದು ಚಂದ್ರನ ಬೆಳಕು ಎಂದಿಗಿಂತಲೂ ಪ್ರಕಾಶಮಾನವಾಗಿರುತ್ತದೆ. ಚಂದ್ರನು ಭೂಮಿಯ ಸಮೀಪದಲ್ಲಿರುತ್ತಾನೆ. ಹಾಗಾಗಿ ಎಂದಿಗಿಂತಲೂ ಶೇ. 7ರಷ್ಟು ಹೆಚ್ಚು ಸೂರ್ಯನ ಬೆಳಕನ್ನು ಚಂದ್ರನು ಪ್ರತಿಫಲಿಸುತ್ತಾನೆ.
   ಕಾತರ್ಿಕ ಮಾಸದಲ್ಲಿ ಸಾಧನೆಯ ಮಾರ್ಗದತ್ತ ಸಾಗಲು ನಮ್ಮ ಋಷಿ ಮುನಿಗಳು ಕೆಲವೊಂದು ಧಾಮರ್ಿಕ ವಿಧಿ ವಿಧಾನಗಳನ್ನು ಉಲ್ಲೇಖಿಸಿದ್ದಾರೆ. ಈ ಬಗ್ಗೆ ವಸಿಷ್ಠ ಋಷಿಗಳು ಕೆಲವೊಂದು ವಿಧಾನಗಳನ್ನು ಸೂಚಿಸಿದ್ದಾರೆ.
    ಕಾತರ್ಿಕ ಮಾಸದಲ್ಲಿ ಶಿವನನ್ನು ಆರಾಧಿಸುವುದರಿಂದ ಹೆಚ್ಚು ಫಲಪ್ರದವಾಗುತ್ತದೆ. ಕಾತರ್ಿಕ ಮಾಸದಲ್ಲಿ ಪವಿತ್ರ ಸ್ನಾನ
ಕಾತರ್ಿಕ ಮಾಸದಲ್ಲಿ ಪ್ರತಿನಿತ್ಯ ಮೂರು ಬಾರಿ ಸ್ನಾನ ಮಾಡುವ ಸಂಪ್ರದಾಯ ಕೆಲವರಲ್ಲಿದೆ. ಸ್ನಾನ ಮಾಡುವುದರಿಂದ, ಭೌತಿಕವಾಗಿ ದೇಹದ ಕಲ್ಮಷಗಳನ್ನು ತೊಳೆದುಕೊಳ್ಳಬಹುದು. ಅದರೊಂದಿಗೆ ಮನಸ್ಸಿನ ಕಲ್ಮಷಗಳನ್ನು ಕಳೆದುಕೊಳ್ಳುವುದರೊಂದಿಗೆ, ನಮ್ಮ ಭಾವನೆಗಳನ್ನು, ಮನಸ್ಸಿನ ಕೋಪ, ತಾಪವನ್ನು ನಿಯಂತ್ರಿಸಿಕೊಳ್ಳಬಹುದು. ನದಿ ತೀರಗಳಲ್ಲಿ ಮಾಡುವ ಜಲ ಸ್ನಾನವು ಜಲ ಚಿಕಿತ್ಸೆಗೆ ಪೂರಕವಾಗಿದೆ. ಪವಿತ್ರ ಸ್ನಾನ ಮಾಡುವುದರಿಂದ ದೇಹ ಹಾಗೂ ಮನಸು ಎರಡು ಶುದ್ಧವಾಗುತ್ತದೆ.
    ದೀಪಗಳನ್ನು ಮನೆಯ ಅಂಗಳದಲ್ಲಿ ಮತ್ತು ಮನೆಯ ಸುತ್ತಮುತ್ತ ಬೆಳಗಬೇಕೆಂಬ ನಿಯಮವಿದೆ. ಶಿವ ಮತ್ತು ವಿಷ್ಣು ಮಂದಿರಗಳಲ್ಲಿ ಸೂಯರ್ೋದಯಕ್ಕೆ ಮುನ್ನ ಮತ್ತು ಸೂಯರ್ೋದಯಕ್ಕೆ ನಂತರ ಭಗವಂತನ ಪ್ರೀತ್ಯರ್ಥವಾಗಿ ಜ್ಯೋತಿಯನ್ನು ಬೆಳಗುತ್ತಾರೆ. ತುಪ್ಪದ ದೀಪವನ್ನು ಬೆಳಗುವುದರಿಂದ ಅಸುರೀ ಶಕ್ತಿಗಳು ನಾಶವಾಗುತ್ತವೆ. ಕ್ರಿಮಿ, ಕೀಟಗಳಿಂದ ಪರಿಸರ ಶುದ್ಧವಾಗುತ್ತದೆ. ಅದರೊಂದಿಗೆ ಮನಸ್ಸಿನ ಅಜ್ಞಾನವು ಕಳೆಯುತ್ತದೆ. ಹೀಗೆ ಮನೆಯಲ್ಲಿ ದೀಪ ಬೆಳಗುವುದರಿಂದ. ಐಶ್ವರ್ಯ, ಸಂಪತ್ತು, ಆರೋಗ್ಯ ಸ್ಥಿರವಾಗುತ್ತದೆ.
       ದೀಪ ಹಚ್ಚಿದ ನಂತರ ತುಳಸಿ ದೇವಿಯ ಪೂಜೆ ಮಾಡಬೇಕು. ತುಳಸಿ ಒಂದು ಗಿಡಮೂಲಿಕಾ ಸಸ್ಯವಷ್ಟೇ ಅಲ್ಲ, ವಾತಾವರಣದಲ್ಲಿ ಆಮ್ಲಜನಕವನ್ನು ಹೆಚ್ಚಿಸುವ ಶಕ್ತಿಯಾಗಿದೆ. ತುಳಸಿ ಪೂಜೆಯನ್ನು ಪ್ರತಿನಿತ್ಯ ಮಾಡುವ ಮಹಿಳೆಯರಿಗೆ ಸೌಭಾಗ್ಯ ಸಿದ್ಧಿಸುತ್ತದೆ. ತುಳಿಸಿ ಗಿಡದ ಮುಂದೆ ದೀಪಾರಾಧಾನೆ ಮಾಡುವುದು ತ್ಯಾಗದ ಸಂಕೇತವಾಗಿದೆ.
      ಶಿವ ಮತ್ತು ವಿಷ್ಣುವಿನ ಆರಾಧನೆಯೊಂದಿಗೆ ಶಿವ ಮತ್ತು ವಿಷ್ಣು ಎರಡೂ ಒಂದೇ ಎನ್ನುವ ಭಾವ ಮೂಡತ್ತದೆ. ಶಿವ ಪ್ರಜ್ಞೆಯ ಸಂಕೇತವಾದರೆ, ವಿಷ್ಣುವು ಸ್ಥಿತಿಕಾರನಾಗಿದ್ದಾನೆ. ಹೇಗೆ ಬ್ರಹ್ಮಾಂಡವು ಸ್ಥಿತಿ ಮತ್ತು ಪ್ರಜ್ಞೆಯಿಂದ ಆವೃತ್ತವಾಗಿದೆಯೋ ಹಾಗೆಯೇ ಶಿವ ಮತ್ತು ವಿಷ್ಣುವಿನ ಪ್ರಜ್ಞೆಯು ನಮ್ಮಲ್ಲಿ ಅಡಕವಾಗಿದೆ. ಇಂತಹ ಪ್ರಜ್ಞೆಯೇ ನಮ್ಮನ್ನು ಅಧ್ಯಾತ್ಮ ಸಾಧನೆಯತ್ತ ಮುನ್ನಡೆಸುತ್ತದೆ.
      ಸೋಮವಾರ ಶಿವನಿಗೆ ಪ್ರಿಯವಾದ ವಾರ. ಸೋಮವಾರದ ಅಧಿಪತಿ ಚಂದ್ರ. ಚಂದ್ರ ಮನೋಕಾರರ ಅಂದರೆ ಮನಸ್ಸಿನ ಮೇಲೆ ಹಿಡಿತವನ್ನು ಸಾಧಿಸುವವ. ಯಾರು ತಮ್ಮ ಮನಸ್ಸನನ್ನು ನಿಗ್ರಹದಲ್ಲಿ ಇಟ್ಟುಕೊಳ್ಳುತ್ತಾರೋ ಅಂತಹ ವ್ಯಕ್ತಿಗಳು ಉನ್ನತ ಸ್ಥಾನಕ್ಕೆ ಏರುತ್ತಾರೆ. ಅದರೊಂದಿಗೆ ತಮ್ಮ ವ್ಯಕ್ತಿತ್ವ ಬೆಳವಣಿಗೆಗೂ ಪೂರಕವಾಗುತ್ತಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries