HEALTH TIPS

No title

               ನಿರಂತರ ಕಾರ್ಯಕ್ರಮಗಳ ಮುಖಾಂತರ ಕನ್ನಡಕ್ಕೆ ಜೀವ : ಕಾಸರಗೋಡು ಚಿನ್ನಾ
    ಕಾಸರಗೋಡು: ಆಡಳಿತ ಹಿತದೃಷ್ಟಿಯಿಂದ ರಾಜ್ಯ ಪುನವರ್ಿಂಗಡಣೆಯ ಸಂದರ್ಭದಲ್ಲಿ ಅನ್ಯಾಯವಾಗಿ ಕಾಸರಗೋಡು ಕೇರಳಕ್ಕೆ ಸೇರ್ಪಡೆಗೊಂಡು ವರ್ಷದಿಂದ ವರ್ಷಕ್ಕೆ ಕನ್ನಡ ಉಸಿರು ಕ್ಷೀಣಿಸುತ್ತಿದ್ದು, ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದ್ದರೆ ರಚನಾತ್ಮಕ ಮತ್ತು ನಿರಂತರ ಕನ್ನಡ ಕಾರ್ಯಕ್ರಮಗಳು ನಿರಂತರವಾಗಿ ನಡೆಸಬೇಕಾಗಿದೆ ಎಂದು ರಂಗಚಿನ್ನಾರಿ ಸಂಚಾಲಕ, ಕನರ್ಾಟಕ ಕೊಂಕಣಿ ಅಕಾಡೆಮಿ ಮಾಜಿ ಅಧ್ಯಕ್ಷ, ಚಿತ್ರ ನಟ, ನಿದರ್ೇಶಕ ಕಾಸರಗೋಡು ಚಿನ್ನಾ ಅವರು ಹೇಳಿದರು.
   ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಕೋಟೆಕಣಿ, ಕನ್ನಡ ಜಾಗೃತಿ ಸಮಿತಿ ಕಾಸರಗೋಡು ಇದರ ನೆರವಿನೊಂದಿಗೆ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಗುರುವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
    ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸಲು ಹಿರಿಯರು ನಿರಂತರವಾಗಿ ಹೋರಾಟವನ್ನು ನಡೆಸುತ್ತಲೇ ಬಂದಿದ್ದಾರೆ. ಆದರೆ ಇದೀಗ ಕನ್ನಡ ಕ್ಷೀಣಿಸುತ್ತಿದೆ ಎಂಬುದು ವಾಸ್ತವ ಸತ್ಯ. ಇಂತಹ ಪರಿಸ್ಥಿತಿಯಲ್ಲಿ ಕನ್ನಡ ಉಳಿಸಿ ಬೆಳೆಸಲು ಇಂದಿನ ತಲೆಮಾರಿನ ಜನಾಂಗ ಮಕ್ಕಳಲ್ಲಿ ಕನ್ನಡ ಜಾಗೃತಿಯನ್ನು ಮೂಡಿಸಿ ಕನ್ನಡವನ್ನು ಉಳಿಸುವ ಪ್ರಯತ್ನ ಮಾಡಬೇಕಾಗಿದೆ. ಮಹಾಜನ ವರದಿ ಜಾರಿಯಾಗಬೇಕೆಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ಹೋರಾಟ ನಡೆಯಬೇಕು. ಚಿಕ್ಕಂದಿನಲ್ಲಿ ನಾವೆಲ್ಲ ಹೋರಾಟ ನಡೆಸಿದ್ದೆವು ಎಂದು ಸ್ಮರಿಸಿದರು. 
    ಕಾಸರಗೋಡಿನಲ್ಲಿ ಕನ್ನಡದ ಕೆಲಸ ಯಾರೇ ಮಾಡಿದರು ಸ್ವಾಗತಿಸಬೇಕೆಂದರು. ಯಾವುದೇ ರೀತಿಯಲ್ಲೂ ಕನ್ನಡದ ಕೆಲಸ ಮಾಡಿದರೂ ಎಲ್ಲರ ಉದ್ದೇಶ ಒಂದೇ. ಅದು ಮಹಾಜನ ವರದಿ ಜಾರಿಯಾಗಬೇಕೆಂಬುದಾಗಿದೆ ಎಂದರು.
   ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದರು. ಹಿರಿಯ ಕವಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಸರಗೋಡು ನಗರಸಭಾ ಸದಸ್ಯ ಶಂಕರ್ ಅವರು ಶುಭಹಾರೈಸಿದರು.
   ಕಾರ್ಯಕ್ರಮದಲ್ಲಿ ಸೌಮ್ಯಾಪ್ರಸಾದ್, ಜಯಾನಂದ ಕುಮಾರ್ ಹೊಸದುರ್ಗ, ಪ್ರೊ.ಎ.ಶ್ರೀನಾಥ್ ಕಾಸರಗೋಡು, ರಘು ಮೀಪುಗುರಿ, ತಾರಾನಾಥ ಮಧೂರು, ದಯಾನಂದ ಬೆಳ್ಳೂರಡ್ಕ, ಯೋಗೀಶ್ ಕೋಟೆಕಣಿ, ಸಂದೇಶ್ ಕೋಟೆಕಣಿ, ಜಯರಾಮ, ಕಿಶೋರ್, ಕೆ.ವಿ.ರಮೇಶ್ ಮುಂತಾದವರು ಉಪಸ್ಥಿತರಿದ್ದರು. 
     ಸತ್ಯನಾರಾಯಣ ಕಾಸರಗೋಡು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಪ್ರತಿಜ್ಞೆ ಬೋಧಿಸಿದ ದಿವಾಕರ ಅಶೋಕ್ನಗರ ವಂದಿಸಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries