ಮುಳ್ಳೇರಿಯ: ಕೇರಳದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದ ನಿರ್ಮಲ್ ಕುಮಾರ್ ಕಾರಡ್ಕ ಅವರನ್ನು ಕುಂಟಾರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಅಭಿನಂದಿಸಲಾಯಿತು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಶಿಧರ.ಪಿ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ವ್ಯವಸ್ಥಾಪಕ ಜಗದೀಶ್ ಮಾಸ್ಟರ್ ನಿರ್ಮಲ್ ಕುಮಾರ್ ಅವರನ್ನು ಶಾಲು ಹೊದೆಸಿ ಅಭಿನಂದಿಸಿದರು. ಮುಖ್ಯ ಶಿಕ್ಷಕಿ ಪ್ರಶಾಂತಾ, ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕ ಅನೀಶ್ ರಾಜ್ ಸ್ವಾಗತಿಸಿ, ಸುಮಂಗಲ ಟೀಚರ್ ವಂದಿಸಿದರು.





