ಅಯೋಧ್ಯೆ ವಿವಾದ: ಜನವರಿ 4ರಿಂದ ಸುಪ್ರೀಂ ಕೋರ್ಟ್ ವಿಚಾರಣೆ ಪ್ರಾರಂಭ
0
ಡಿಸೆಂಬರ್ 25, 2018
ನವದೆಹಲಿ: ರಾಮಜನ್ಮಭೂಮಿ, ಅಯೋಧ್ಯೆ ವಿವಾದದ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠ ಜನವರಿ 4ರಿಂದ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಅಯೋಧ್ಯೆ ವಿವಾದದ ವಿಚಾರಣೆ ವಿಳಂಬ ಹಾಗೂ ತ್ವರಿತಗತಿಯ ವಿಚಾರಣೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಕಳೆದ ಅಕ್ಟೋಬರ್ ನಲ್ಲಿ ವಿಚಾರಣೆ ಅರಂಭಿಸಿದ್ದ ನ್ಯಾಯಾಲಯವು ತನಗೆ ಯಾವ ವಿಚಾರ ಎಷ್ಟು ಪ್ರಮುಖ ಎನ್ನುವುದು ತಿಳಿದಿದೆ ಎಂದು ಹೇಳಿತ್ತು. ಅಲ್ಲದೆ ಅಯೋಧ್ಯೆ ವಿವಾದ ಸಂಬಂಧದ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಿ ಆದೇಶಿಸಿತ್ತು.
ಇದೀಗ ಜನವರಿ 4ರಿಂದ ವಿಚಾರಣೆ ಪ್ರಾರಂಬವಾಗಲಿದೆ ಎಂದು ಕೋರ್ಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿವಾದ ಸಂಬಂಧದ ವಿಚಾರಣೆ ಜನವರಿಗೆ ಮುಂದೂಡಲ್ಪಟ್ಟ ಬೆನ್ನಲ್ಲೇ ರಾಮಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ಕೇಂದ್ರದ ಮೇಲೆ ಒತ್ತಡಗಳು ಹೆಚ್ಚಾಗುತ್ತಾ ಬಂದಿದ್ದವು.ಬಿಜೆಪಿ, ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನು ಜಾರಿ ಮಾಡಲು ಸರ್ಕಾರವನ್ನು ಒತ್ತಾಯಿಸಿದ್ದವು./ಈ ವಿಚಾರ ಬಿಜೆಪಿ ಹಾಗೂ ಶಿವಸೇನೆ ನಡುವೆ ವಾಕ್ಸಮರಕ್ಕೆ ಸಹ ಕಾರಣವಾಗಿತ್ತು.
ಈ ನಡುವೆ ರಾಮ ಮಂದಿರ ನಿರ್ಮಾಣದ ದಿನಾಂಕವನ್ನು ಕೇಂದ್ರ ಸರ್ಕಾರ ಪ್ರಕಟಿಸಬೇಕು ಎಂದು ಅಯೋಧ್ಯೆಯಲ್ಲಿ ಇತ್ತೀಚೆಗೆ ನಡೆದಿದ್ದ ಧರ್ಮ ಸಂಸತ್ ಸಹ ನಿರ್ಣಯ ಕೈಗೊಂಡಿತ್ತು.


