ಕೇರಳ ತುಳು ಅಕಾಡೆಮಿಯ ವತಿಯಿಂದ ಕ್ರಿಸ್ಮಸ್ ಪೊಲಬು
0
ಡಿಸೆಂಬರ್ 20, 2018
ಮಂಜೇಶ್ವರ: ಕೇರಳ ತುಳು ಅಕಾಡೆಮಿಯ ಆಶ್ರಯದಲ್ಲಿ ಡಿ. 24 ರಂದು ಕ್ರಿಸ್ಮಸ್ ಪೊಲಬು ಕಾರ್ಯಕ್ರಮ ವರ್ಕಾಡಿಯ ಮುರತ್ತಣೆಯಲ್ಲಿ ಸಂಜೆ 3.30 ರಿಂದ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ತುಳು ಭಾಷೆಗೆ ಕ್ರೈಸ್ತ ಮಿಷನರಿಗಳ ಕೊಡುಗೆ ಎಂಬ ವಿಷಯದ ಕುರಿತು ವರ್ಕಾಡಿ ಚರ್ಚಿನ ಧರ್ಮಗುರು ರೆ.ಫಾ. ಫ್ರಾನ್ಸಿಸ್ ರೊಡ್ರಿಗಸ್ ವಿಚಾರ ಮಂಡನೆ ನಡೆಸುವರು. ಕರ್ನಾಟಕದ ನಿವೃತ್ತ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಹಾಗೂ ಮಾಜಿ ಕರ್ನಾಟಕ ಲೋಕಾಯುಕ್ತ ರಿಜಿಸ್ಟ್ರಾರ್ ಮೂಸಾಕುಞÂ ನಾಯರ್ಮೂಲೆ ಕಾರ್ಯಕ್ರಮ ಉದ್ಘಾಟಿಸುವರು. ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಅಬ್ದುಲ್ ಮಜೀದ್ ಬಿ.ಎ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕೇರಳ ತುಳು ಅಕಾಡೆಮಿಯ ಅಧ್ಯಕ್ಷ ಉಮೇಶ್ ಎಂ ಸಾಲಿಯಾನ್ ಅಧ್ಯಕ್ಷತೆ ವಹಿಸುವರು. ವಿಶೇಷ ಆಕರ್ಷಣೆಯಾಗಿ ಮಂಗಳೂರು ಬಜ್ಪೆಯ ಥಂಡರ್ ಗೈಸ್ ಫೌಂಡೇಶನ್ ತಂಡದವರಿಂದ ಕ್ರಿಸ್ಮಸ್ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಸಾಹಿತ್ಯಾಭಿಮಾನಿಗಳು ಯಶಸ್ವಿಗೊಳಿಸಬೇಕಾಗಿ ಅಕಾಡೆಮಿ ಪ್ರಕಟಣೆಯಲ್ಲಿ ವಿನಂತಿಸಿದೆ.

