ಭಾಷಾ ಶಾಸ್ತ್ರಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯರಿಗೆ ಭಾಷಾ ಸಮ್ಮಾನ್ ಪ್ರಶಸ್ತಿ ಪ್ರದಾನ
0
ಡಿಸೆಂಬರ್ 25, 2018
ಬೆಂಗಳೂರು: ಕನ್ನಡದ ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ `ಭಾಷಾ ಸಮ್ಮಾನ್' ಪುರಸ್ಕಾರವನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಜಯನಗರದ ಜಯರಾಮ ಸೇವಾ ಮಂಡಳಿಯಲ್ಲಿ ನಿನ್ನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೆಂಕಟಸುಬ್ಬಯ್ಯ ನಮ್ಮ ಗುರುಗಳಾದ ಬಿಎಂಶ್ರೀ ಅಂದು ನನಗೆ ಕನ್ನಡವನ್ನು ನಿಮ್ಮ ಕೈಯಲ್ಲಿಟ್ಟಿರುವೆ, ಕಾಪಾಡಿಕೊಳ್ಳಿ ಎಂಬ ಸಲಹೆ ನೀಡಿದ್ದರು. ಅವರ ಸೂಚನೆಯನ್ನು ಪಾಲಿಸಿದ ಫಲವೇ ಈ ಪ್ರಶಸ್ತಿ ಎಂದು ಹೇಳಿದ್ದಾರೆ.
ಭಾಷಾ ಸಮ್ಮಾನ್ ಗೌರವವು ಒಂದು ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.


