ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ಪ್ರತಾಪ್ ರೂಡಿ ನೇಮಕ
0
ಡಿಸೆಂಬರ್ 22, 2018
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಷ್ಟ್ರೀಯ ವಕ್ತಾರರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ರೂಡಿ ಅವರನ್ನು ರಾಷ್ಟ್ರೀಯ ವಕ್ತಾರ ಹುದ್ದೆಗೆ ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ರಿ ದೇವಿ ವಿರುದ್ಧ ಗೆಲುವು ಸಾಧಿಸಿದ್ದ ರೂಡಿ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಖಾತೆ ಸಚಿವರಾಗಿದ್ದರು.


