ಕಾಟುಕುಕ್ಕೆಯಲ್ಲಿ ಧನು ಪೂಜೆ ಇಂದಿನಿಂದ
0
ಡಿಸೆಂಬರ್ 16, 2018
ಪೆರ್ಲ:ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಳದಲ್ಲಿ ಬ್ರಹ್ನಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲಿದಿಂದಿನಿಂದ (ಡಿ.17ರಿಂದ) ಜ.14ರ ತನಗ ಪ್ರತಿದಿನ ಬೆಳಿಗ್ಗೆ 5.30ಕ್ಕೆ ಧನುಪೂಜೆ ನಡೆಯಲಿದೆ.
ಇಂದು ಬೆಳಿಗ್ಗೆ 5ಕ್ಕೆ ಭಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರು ದೀಪೋಜ್ವಲನೆ ನಡೆಸಿ ಉದ್ಘಾಟಿಸಲಿದ್ದಾರೆ.ಮಾಣಿಲ ದೇಲಂತಮಜಲು ವಿಷ್ಣುಮೂರ್ತಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಗಣೇಶ ಕುಮಾರ್ ದೇಲಂತಮಜಲು, ಕೆಡೆಂಜಿ ಮಹಾವಿಷ್ಣು ಕ್ಷೇತ್ರದ ಅಧ್ಯಕ್ಷ ವಸಂತ ಪೈ, ಧನು ಪೂಜಾ ಸಮಿತಿ ಪದಾಧಿಕಾರಿಗಳು, ದೇವಳದ ಆಡಳಿತ ಮಂಡಳಿ ಪದಾಧಿಕಾರಿಗಳು, ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಸದಸ್ಯರು, ಅರ್ಚಕರು, ಸಿಬ್ಬಂದಿ ವರ್ಗ ಸದಸ್ಯರು ಉಪಸ್ಥಿತರಿರುವರು.
ಬೆಳಿಗ್ಗೆ 5ರಿಂದ ರುದ್ರ ಪಾರಾಯಣ, 5.30ರಿಂದ ಭಜನಾ ಕಾರ್ಯಕ್ರಮ ನಡೆಯುವುದು. ಧನುಪೂಜೆಯ ಎಲ್ಲಾ ದಿನಗಳಲ್ಲೂ ಬೆಳಿಗ್ಗೆ 5ರಿಂದ ಧನು ಮಾಸದ ವಿಶೇಷ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, 6.30ಕ್ಕೆ ಪ್ರಾತಃಕಾಲದ ಪೂಜೆ, ಪ್ರಸಾದ ವಿತರಣೆ ಬಳಿಕ ಉಪಹಾರ ವ್ಯವಸ್ಥೆ ಇರಲಿದೆ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

