HEALTH TIPS

ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಪಕ್ಷದ ಮುಖ್ಯಸ್ಥರೇ ಹೊಣೆ: ನಿತಿನ್ ಗಡ್ಕರಿ

ನವದೆಹಲಿ: ಸಂಸದರು, ಶಾಸಕರ ಕಾರ್ಯಕ್ಷಮತೆ ಸರಿ ಇಲ್ಲದಿದ್ದರೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಪಕ್ಷದ ನಾಯಕತ್ವ ವಿರುದ್ಧ ತೀಕ್ಷ್ಣವಾಗಿ ಟೀಕೆ ಮಾಡಿದ ನಿತಿನ್ ಗಡ್ಕರಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಗೃಹ ಸಚಿವಾಲಯದ ಯಶಸ್ಸಿಗೆ ತರಬೇತಿ ಹಾಗೂ ಕೌಶಲಯುತ ಐಎಎಸ್ , ಐಪಿಎಸ್ ಅಧಿಕಾರಿಗಳು ಪ್ರಮುಖ ಕಾರಣ. ಈ ಎಲ್ಲಾ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ನಾನು ಪಕ್ಷದ ಅಧ್ಯಕ್ಷನಾಗಿದ್ದುಕೊಂಡು ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಯಾರು ಜವಾಬ್ದಾರರಾಗಬೇಕಾಗುತ್ತದೆ? ಎಂದು ನಿತಿನ್ ಗಡ್ಕರಿ ಪ್ರಶ್ನಿಸಿದ್ದಾರೆ. ಮಧ್ಯಪ್ರದೇಶ, ರಾಜಸ್ತಾನ, ಹಾಗೂ ಛತ್ತೀಸ್ ಗಡ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋತ ಕೆಲವು ವಾರಗಳ ಬಳಿಕ ನಿತಿನ್ ಗಡ್ಕರಿ ಪಕ್ಷದ ನಾಯಕತ್ವವನ್ನು ಪ್ರಶ್ನಿಸಿದ್ದರು. ಚುನಾವಣೆಯಲ್ಲಿ ಸೋತರೆ ಪಕ್ಷದ ನಾಯಕರೇ ಜವಾಬ್ದಾರಿ ಹೊರಬೇಕಾಗುತ್ತದೆ. ಸೋಲಿನ ಹೊಣೆ ಹೊರುವುದೂ ಸಹ ನಾಯಕತ್ವದ ಭಾಗವಾಗಿರಬೇಕು ಎಂದು ಅವರು ಹೇಳಿಕೆ ನೀಡಿದ್ದರು. ಈ ಬಗ್ಗೆ ಕೆಲ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಮಾಹಿತಿ ಹರಡುವ ಮೂಲಕ ಪಕ್ಷ ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನ ನಡೆಸಲಾಗುತ್ತಿದೆ ಎಂದು ತಮ್ಮ ಬ್ಲಾಗ್ ನಲ್ಲಿ ನಿತಿನ್ ಗಡ್ಕರಿ ಬರೆದುಕೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries