ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕ
0
ಡಿಸೆಂಬರ್ 11, 2018
ನವದೆಹಲಿ: ಉರ್ಜಿತ್ ಪಟೇಲ್ ಅವರು ವೈಯಕ್ತಿಕ ಕಾರಣಗಳಿಂದ ಆರ್ ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಕೇಂದ್ರ ಸರ್ಕಾರ ಶಕ್ತಿಕಾಂತ್ ದಾಸ್ ಅವರನ್ನು ನೂತನ ಆರ್ ಬಿಐ ಗವರ್ನರ್ ಆಗಿ ನೇಮಕ ಮಾಡಿದೆ.
ಆರ್ಥಿಕ ವ್ಯವಹಾರಗಳ ಮಾಜಿ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಅವರು ಆರ್ ಬಿಐನ 25ನೇ ಗವರ್ನರ್ ಆಗಿ ನೇಮಕಗೊಂಡಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಶಕ್ತಿಕಾಂತ್ ದಾಸ್ ಅವರನ್ನು ಮೂರು ವರ್ಷಗಳ ಅವಧಿಗೆ ಆರ್ ಬಿಐ ಗವರ್ನರ್ ಆಗಿ ನೇಮಕ ಮಾಡಲಾಗಿದ್ದು, ಸಂಪುಟ ನೇಮಕಾತಿ ಸಮಿತಿ ಮಂಗಳವಾರ ಒಪ್ಪಿಗೆ ಸೂಚಿಸಿದೆ.
ಎನ್ ಪಿಎ ಹಾಗೂ ಆರ್ ಬಿಐ ಸೆಕ್ಷನ್ 7 ರ ಸಂಬಂಧ ಆರ್ ಬಿಐ-ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದ ನಡುವೆ ಆರ್ ಬಿಐ ಗವರ್ನರ್ ಆಗಿದ್ದ ಉರ್ಜಿತ್ ಪಟೇಲ್ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.




