ಪ್ರಭಾವತಿ ಕೆದಿಲಾಯರಿಗೆ ಶಿಕ್ಷಕ ಪ್ರಶಸ್ತಿ
0
ಡಿಸೆಂಬರ್ 14, 2018
ಬದಿಯಡ್ಕ : ಬದಿಯಡ್ಕ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕಿ ಪುಂಡೂರು ಪ್ರಭಾವತಿ ಕೆದಿಲಾಯರಿಗೆ ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ವಿಶ್ವ ವಿನೂತನ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕøತಿಕ ಅಕಾಡೆಮಿಯ 2018ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ ಲಭಿಸಿದೆ. ಪ್ರಭಾವತಿ ಕೆದಿಲಾಯರ ಸಾಹಿತ್ಯ, ಶಿಕ್ಷಣ ಸಹಿತ ಬಹುಮುಖಿ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.
ಕೆದಿಲಾಯರಿಗೆ ಈ ವರ್ಷದ ಬೆಂಗಳೂರಿನ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ವಿಶ್ವೇಶ್ವರಯ್ಯ ಅವರ 157ನೇ ಜನ್ಮದಿನಾಚರಣೆಯ ಅಂಗವಾಗಿ ನೀಡುವ ಈ ವರ್ಷದ ವಿಶ್ವೇಶ್ವರಯ್ಯ ಶಿಕ್ಷಕ ಪ್ರಶಸ್ತಿಯೂ ದೊರೆತಿತ್ತು. ಇವರು ಬದಿಯಡ್ಕದ ರಂಗಸಿರಿ ಸಾಂಸ್ಕøತಿಕ ವೇದಿಕೆ, ಕೆದಿಲಾಯ ಪ್ರತಿಷ್ಠಾನ ಕಾಸರಗೋಡು ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ಯುವ ಬರಹಗಾರರ ಒಕ್ಕೂಟದ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದಾರೆ. ಕನ್ನಡ ಅಧ್ಯಾಪಕ ಸಂಘಟನೆಯೂ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರಿಗೆ ಈ ಮೊದಲು ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿ, ಎಚ್‍ಎಸ್ಕೆ ಪ್ರಶಸ್ತಿ, ಸುವರ್ಣ ಕರ್ನಾಟಕ ಸೇವಾ ಪ್ರಶಸ್ತಿ, ಲತಾ ರಾಜಶೇಖರನ್ ಸಾಹಿತ್ಯ ಪ್ರಶಸ್ತಿ ಮೊದಲಾದ ಅನೇಕ ಗೌರವಗಳು ದೊರೆತಿದೆ. ಅನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಅನೇಕ ಹೊಸ ಪ್ರತಿಭೆಗಳನ್ನು ಸಾಹಿತ್ಯಕ್ಷೇತ್ರಕ್ಕೆ ಪರಿಚಯಿಸಿದ್ದಾರೆ. ಇವರಿಗೆ ಶಿಕ್ಷಣರತ್ನ ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 22ರಂದು ಬೆಳಿಗ್ಗೆ 10 ಘಂಟೆಗೆ ಹಂಸಭಾವಿ ಲಕ್ಷಾಪತಿ ಹಾಲೇವಾಡಿಮಠದ ಆವರಣದಲ್ಲಿ ನಡೆಯುವ ನುಡಿ ವೈಭವ ಕಾರ್ಯಕ್ರಮದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.


