ಕಾಶ್ಮೀರದಲ್ಲಿ ನಿನ್ನೆ ಮಧ್ಯರಾತ್ರಿಯಿಂದ ರಾಷ್ಟ್ರಪತಿ ಆಡಳಿತ ಜಾರಿ
0
ಡಿಸೆಂಬರ್ 20, 2018
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಆರು ತಿಂಗಳ ರಾಜ್ಯಪಾಲರ ಆಡಳಿತ ಬುಧವಾರ ಅಂತ್ಯಗೊಂಡಿದ್ದು, ಮಧ್ಯರಾತ್ರಿಯಿಂದ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಸಹಿ ಹಾಕಿದ್ದು, ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಮಾಡಿದ್ದ ಶಿಫಾರಸಿಗೆ ಕಳೆದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.
ಕಳೆದ ಜೂನ್ ನಲ್ಲಿ ಬಿಜೆಪಿ, ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಸಕರ್ಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದ ನಂತರ ರಾಜ್ಯಪಾಲರ ಆಡಳಿತ ಜಾರಿಗೊಳಿಸಲಾಗಿತ್ತು. ಆರು ತಿಂಗಳ ರಾಜ್ಯಪಾಲರ ಆಡಳಿತ ಅಂತ್ಯಗೊಂಡ ನಂತರ ಪಿಡಿಪಿ, ಕಾಂಗ್ರೆಸ್ ಹಾಗೂ ಎನ್ ಸಿ ಸೇರಿ ಸಕರ್ಾರ ರಚಿಸಲು ಮುಂದಾಗಿದ್ದವು. ಆದರೆ ಇದಕ್ಕೆ ಅವಕಾಶ ನೀಡದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು, ನವೆಂಬರ್ 21ರಂದು ಕಣಿವೆ ರಾಜ್ಯದ ವಿಧಾನಸಭೆಯನ್ನು ವಿಸಜರ್ಿಸಿದ್ದರು.


