ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಪ್ರತಿಷ್ಠೆ
0
ಡಿಸೆಂಬರ್ 12, 2018
ಮುಳ್ಳೇರಿಯ: ಗಾಳಿಮುಖ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವವು ಬ್ರಹ್ಮಶ್ರೀ ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ರವೀಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ನಡೆಯಿತು.
ಬುಧವಾರ ಬ್ರಹ್ಮಶ್ರೀ ವಾಸುದೇವ ತಂತ್ರಿಯವರಿಂದ ಶ್ರೀ ಅಯ್ಯಪ್ಪ ಸ್ವಾಮಿಯ ಛಾಯಾಚಿತ್ರ ಪ್ರತಿಷ್ಠೆ ನಡೆಯಿತು. ಬಳಿಕ ಶ್ರೀ ಮಹಾವಿಷ್ಣು ಕೃಪಾಶ್ರಿತ ಯಕ್ಷಗಾನ ಕಲಾಸಂಘ ಕುಂಟಾರು ಮತ್ತು ಅತಿಥಿ ಕಲಾವಿದರಿಂದ ಯಕ್ಷಗಾನ ಕೂಟ, ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು, ದಾಮೋದರ ಮಾಸ್ತರ್ ಸುಳ್ಯಪದವು, ಚಿನ್ಮಯಿ.ವಿ.ಭಟ್ ಮತ್ತು ಬಳಗದವರಿಂದ ಗಾನವೈವಿಧ್ಯ, ಕುಂಟಾರು ಶ್ರೀ ಮಹಾವಿಷ್ಣುಮೂರ್ತಿ ಕ್ಷೇತ್ರದಿಂದ ಉಲ್ಪೆ ಮೆರವಣಿಗೆ, ಭಜನೆ ನಡೆಯಿತು.


