HEALTH TIPS

ತ್ರಿವಳಿ ತಲಾಖ್ ಮಸೂದೆ ಲೋಕಸಭೆಯಲ್ಲಿ ಮಂಡನೆ

ದೆಹಲಿ: ತ್ರಿವಳಿ ತಲಾಖ್ ಮಸೂದೆ ಅಥವಾ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆಯನ್ನು ಡಿ.17 ರಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ. 2019 ರ ಸಂಸತ್ ಚುನಾವಣೆಗೂ ಮುನ್ನ ಸಂಸತ್ ನಲ್ಲಿ ಮಸೂದೆಗೆ ಅಂಗೀಕಾರ ಪಡೆಯುವ ಉದ್ದೇಶ ಹೊಂದಿರುವ ಸರ್ಕಾರ, ಕಳೆದ ಮುಂಗಾರು ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕರಿಸಲು ವಿಫಲವಾಗಿತ್ತು. ಈ ಬಳಿಕ ಸೆ.19 ರಂದು ತ್ರಿವಳಿ ತಲಾಖ್ ನ್ನು ಕ್ರಿಮಿನಲ್ ಅಪರಾಧಗೊಳಿಸಿ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ 21 ಮಸೂದೆಗಳನ್ನು ಅಂಗೀಕರಿಸಲಾಗಿದ್ದರೆ, ರಾಜ್ಯಸಭೆಯಲ್ಲಿ 14 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಆದರೆ ತ್ರಿವಳಿ ತಲಾಖ್ ಮಸೂದೆ ಅಂಗೀಕಾರ ಮಾತ್ರ ವಿಫಲವಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries