ಎರಿಂಜೇರಿ ಭಜನಾ ಮಂದಿರದಲ್ಲಿ ಛಾಯಾಚಿತ್ರ ಪ್ರತಿಷ್ಠೆ
0
ಡಿಸೆಂಬರ್ 28, 2018
ಮುಳ್ಳೇರಿಯ: ಇಲ್ಲಿಗೆ ಸಮೀಪದ ಎರಿಂಜೇರಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕøತಿಕ ಸಮ್ಮೇಳನ ನಡೆಯಿತು.
ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವೆಳ್ಳಿಕ್ಕೋತ್ ವಿಷ್ಣು ಭಟ್ ಅವರಿಂದ ಸಂಗೀತ ಕಛೇರಿ, ಸ್ಥಳೀಯರಿಂದ ನೃತ್ಯ ವೈವಿಧ್ಯ ನಡೆಯಿತು. ಕಾಮಲೋನ್ ಕುಂಞಂಬು ಗುರುಸ್ವಾಮಿಯವರು ಶ್ರೀ ಅಯ್ಯಪ್ಪ ಸ್ವಾಮಿಯ ಛಾಯಾಚಿತ್ರ ಪ್ರತಿಷ್ಠೆಯನ್ನು ನೆರವೇರಿಸಿದರು.





