HEALTH TIPS

ಫೆ.11 ಚಿಗುರುಪಾದೆ ವಾರ್ಷಿಕ ಜಾತ್ರಾ ಮಹೋತ್ಸವ

                 
        ಮಂಜೇಶ್ವರ : ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವವು ಫೆಬ್ರವರಿ 11 ರಿಂದ  ವಿವಿಧ ವೈದಿಕ, ಧಾರ್ಮಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
     ಬೆಳಿಗ್ಗೆ  7ರಿಂದ  ಉಷಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶರುದ್ರಾಭಿಷೇಕ, ಮಧ್ಯಾಹ್ನ 12ರಿಂದ ಮಹಾಪೂಜೆ, ಶ್ರೀದೇವರಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ ಗಂಟೆ 8ಕ್ಕೆ ರಂಗಪೂಜೆ ,9ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ.
     ಧಾರ್ಮಿಕ ಹಾಗೂ ಸಾಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಪೂರ್ವಾಹ್ನ 10ರಿಂದ ಭಜನಾ ಸತ್ಸಂಗ ನಡೆಸಿಕೊಡುವವರು 'ಬಂಟ್ಸ್ ಮಾತೃ ಮಂಡಳಿ ಕದ್ರಿ ಮಂಗಳೂರು',  ಸಂಜೆ  6 ರಿಂದ ಗೀತ ಸಾಹಿತ್ಯ ಸಂಭ್ರಮ ವಿಠಲ ನಾಯಕ್ ಮತ್ತು ಬಳಗ ಕಲ್ಲಡ್ಕ ತಂಡದಿಂದ ನಡೆಯಲಿದೆ ಎಂದು ಕ್ಷೇತ್ರ ಪ್ರಕಟಣೆ ತಿಳಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries