HEALTH TIPS

ನಾಳೆ (ಫೆ. 1) ಕೇಂದ್ರ ಮಧ್ಯಂತರ ಬಜೆಟ್: ಪಿಯೂಷ್ ಗೋಯೆಲ್


         ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಫೆಬ್ರವರಿ 1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಾಗುವುದು ಎಂದು ಸಚಿವ ಪಿಯೂಶ್ ಗೋಯೆಲ್ ಹೇಳಿದ್ದಾರೆ.
       ದೆಹಲಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಪಿಯೂಷ್ ಗೋಯೆಲ್ , ಫೆಬ್ರವರಿ 1 ರಂದು ಬಜೆಟ್ ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯಲಿದ್ದು, ಫೆಬ್ರವರಿ 1 ರಂದು ಆಯವ್ಯಯ ಮಂಡನೆಯಾಗಲಿದೆ.
     ಇಂದು  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ಈ ಮಧ್ಯಂತರ ಬಜೆಟ್?ನಲ್ಲಿ ಮೋದಿ ಸರ್ಕಾರ ನೌಕರರಿಗೆ ಹೆಚ್ಚಿನ ಪರಿಹಾರ ನೀಡುವ ನಿರೀಕ್ಷೆಯಿದೆ. ಆದಾಯ ತೆರಿಗೆ ಮಿತಿ ದ್ವಿಗುಣಗೊಳ್ಳುವ ಬಗ್ಗೆ ನಿರೀಕ್ಷಿಸಲಾಗಿದ್ದು, ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಮಿತಿಯನ್ನು ಸರ್ಕಾರ 5 ಲಕ್ಷ ರೂ. ಗೆ ಅಧಿಕಗೊಳಿಸಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries