ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವವು ಜ.26ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ, ದೀಪಪ್ರಜ್ವಲನೆ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿರುವುದು. ಅಪರಾಹ್ನ 2 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶಾಲಾ ಆಡಳಿತ ಸೇವಾ ಸಮಿತಿ ಅಧ್ಯಕ್ಷ ಎಸ್.ಎನ್. ರಾವ್ ಮನ್ನಿಪ್ಪಾಡಿ ಅಧ್ಯಕ್ಷತೆ ವಹಿಸಲಿರುವರು. ಅಭ್ಯಾಗತರಾಗಿ ಎಡನಾಡು ಗ್ರಾಮಾಧಿಕಾರಿ ಸತ್ಯನಾರಾಯಣ ತಂತ್ರಿ, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂರ್ತಿ ಕೆ., ಪ್ರಗತಿಪರ ಕೃಷಿಕರಾದ ಗೋವಿಂದ ಭಟ್ ಮುಳ್ಳಂಕೊಚ್ಚಿ ಹಾಗೂ ಪಿ.ಜಿ. ಶ್ರೀಕೃಷ್ಣ ಭಟ್ ಪುದುಕೋಳಿ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಮುಜುಂಗಾವು ಮಾತನಾಡಲಿದ್ದಾರೆ.


