ತಿರುವನಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಆಕ್ರೋಶ ಭುಗಿಲೆದ್ದಿದ್ದು ಕರ್ಮಾ ಸಮಿತಿ ತೀವ್ರ ಪ್ರತಿಭಟನೆ ನಡೆಸುತ್ತಿದೆ.
ಇಂದು ಮುಂಜಾನೆ 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಇಂದು ಬೆಳಗ್ಗೆ ಸುಮಾರು 3.45ರ ವೇಳೆಯಲ್ಲಿ ಶಬರಿ ಗಿರಿಗೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದರು. ಈ ವಿಚಾರ ತಿಳಿದ ಬೆನ್ನಲ್ಲೇ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಅಲ್ಲದೆ ದೇವಸ್ವಂ ಮಂಡಳಿಯ ಪ್ರಧಾನ ಅರ್ಚಕರು ಹಾಗೂ ತಂತ್ರಿಗಳ ನೇತೃತ್ವದಲ್ಲಿ ದೇಗುಲದಲ್ಲಿ ಶುದ್ದೀಕರಣ ಕಾರ್ಯ ಮಾಡಲಾಗಿತ್ತು.
ಸತತ ಮೂರು ಗಂಟೆಗಳ ಶುದ್ಧೀಕರಣ ಕಾರ್ಯದ ಬಳಿಕ ಇದೀಗ ದೇಗುಲದ ಬಾಗಿಲು ತೆರೆದು ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.





