HEALTH TIPS

ಪಾಪಿಸ್ತಾನಕ್ಕೆ ಉಗ್ರ ಶಾಕ್: ಪಾಕ್ ನಿಂದ ಆಮದಾಗುವ ಎಲ್ಲಾ ವಸ್ತುಗಳ ಸುಂಕ ಶೇ. 200ರಷ್ಟು ಏರಿಕೆ

ನವದೆಹಲಿ: ಪುಲ್ವಾಮ ಉಗ್ರ ದಾಳಿಯ ನಂತರ ಭಾರತ ಮತ್ತೊಂದು ಬಿಗ್ ಶಾಕ್ ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನದಿಂದ ಆಮದು ಆಗುವ ಎಲ್ಲಾ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಶೇ.200 ರಷ್ಟು ಹೆಚ್ಚಳ ಮಾಡಿದೆ. ನಿನ್ನೆಯಷ್ಟೇ ಪಾಕಿಸ್ತಾನಕ್ಕೆ ನೀಡಲಾಗಿದ್ದ ಆಪ್ತ ರಾಷ್ಟ್ರ ಸ್ಥಾನಮಾನನ್ನು ಹಿಂಪಡೆದಿದ್ದ ಭಾರತ ಇಂದು ಪಾಕ್ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಶೇ.200 ಹೆಚ್ಚಳ ಮಾಡಿದೆ. ಪಾಕಿಸ್ತಾನಕ್ಕೆ ನೀಡಿದ್ದ ಆಪ್ತ ರಾಷ್ಟ್ರದ ಸ್ಥಾನಮಾನ ಹಿಂಪಡೆದಿರುವ ಹಿನ್ನೆಲೆಯಲ್ಲಿ ಪಾಕ್?ನಿಂದ ಭಾರತಕ್ಕೆ ರಫ್ತು ಮಾಡುವ ಉತ್ಪನ್ನಗಳ ಮೇಲಿನ ಮೂಲ ಸೀಮಾ ಸುಂಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶೇ.200 ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್? ಜೇಟ್ಲಿ ಅವರು ಟ್ವೀಟ್ ಮಾಡಿದ್ದಾರೆ. 2017-18ನೇ ಸಾಲಿನಲ್ಲಿ ಪಾಕ್ ನಿಂದ ಭಾರತಕ್ಕೆ ಒಟ್ಟು 3,482.3 ಕೋಟಿ ರೂ. ಮೌಲ್ಯದ ಉತ್ಪನ್ನಗಳು ಭಾರತಕ್ಕೆ ಆಮದಾಗಿದ್ದವು. ತಾಜಾ ಹಣ್ಣುಗಳು, ಸಿಮೆಂಟ್, ಪೆಟ್ರೋಲಿಯಂ ಉತ್ಪನ್ನಗಳು, ಖನಿಜ ಮತ್ತು ಅದಿರು ಮತ್ತು ಚರ್ಮದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲಾಗಿತ್ತು. ಆದರೀಗ ಈ ಉತ್ಪನ್ನಗಳ ಮೇಲಿನ ಆಮದು ಸುಂಕ ಶೇ.200 ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಾಕ್‍ನಿಂದ ಭಾರತಕ್ಕೆ ರಫ್ತಾಗುವ ಉತ್ಪನ್ನಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವುದು ನಿಶ್ಚಿತವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries