ಫೆ.22 ರಂದು ಉಚಿತ ನೇತ್ರ ಮತ್ತು ದಂತ ಚಿಕಿತ್ಸಾ ಶಿಬಿರ
0
ಫೆಬ್ರವರಿ 21, 2019
ಮಂಜೇಶ್ವರ: ಶ್ರೀ ಸತ್ಯಸಾಯಿ ಸೇವಾ ಸಮಿತಿ ದೈಗೋಳಿ, ಶ್ರೀ ಸಾಯಿ ಸೇವಾ ಪ್ರತಿಷ್ಠಾನ ದೈಗೋಳಿ ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ವೆನ್‍ಲಾಕ್ ಆಸ್ಪತ್ರೆ, ಕೆ.ಎಂ.ಸಿ. ಮಂಗಳೂರು ಇದರ ಸಹಭಾಗಿತ್ವದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಾಗು ಸಮುದಾಯ ದಂತ ವಿಭಾಗ ಯನಪೆÇೀಯ, ದಂತ ವೈದ್ಯಕೀಯ ಕಾಲೇಜು ಮತ್ತು ಯೆನಪೆÇೀಯ ಆಸ್ಪತ್ರೆ ಸಹಭಾಗಿತ್ವದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವು ಫೆ.22 ಶುಕ್ರವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರ ವರೆಗೆ ಮಿತ್ತಾವು ಪಾತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಲಭ್ಯವಿರುವ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9645126739 ನಂಬ್ರದಲ್ಲಿ ಸಂಪರ್ಕಿಸಬಹುದು.

