HEALTH TIPS

ಗೋಸಾಡ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ

ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮಹೋತ್ಸವವು ಫೆ.15ರಂದು ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳವರ ನೇತೃತ್ವದಲ್ಲಿ ಬಲಿವಾಡುಕೂಟ ಸಹಿತ ವಿವಿಧ ವೈದಿಕ-ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಅಂದು ಪೂರ್ವಾಹ್ನ 8 ಗಂಟೆಗೆ ಗಣಪತಿ ಹೋಮ, 11.30ರಿಂದ ನವಕಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ರಾತ್ರಿ 8.30ಕ್ಕೆ ಕಾರ್ತಿಕ ಪೂಜೆ ನಡೆಯಲಿರುವುದು. ಇದೇ ಸಂದರ್ಭದಲ್ಲಿ 2019 ಏಪ್ರಿಲ್ 4 ಮತ್ತು 5ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ (ಕೆಂಡಸೇವೆ)ದ ಆಮಂತ್ರಣ ಪತ್ರಿಕೆಯನ್ನು ಬೆಳಗ್ಗೆ 10 ಗಂಟೆಗೆ ಬಿಡುಗಡೆಗೊಳಿಸಲಾಗುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries