HEALTH TIPS

ಪರೀಕ್ಷೆ- ನಿರೀಕ್ಷೆ -ಸಿದ್ದತಾ ಕಾರ್ಯಾಗಾರ

ಕುಂಬಳೆ: ಹವ್ಯಕ ಮಹಾ ಮಂಡಲದ ಮುಳ್ಳೇರಿಯಾ ಮಂಡಲ ವಿದ್ಯಾರ್ಥಿವಾಹಿನಿಯ ಸಹಕಾರದೊಂದಿಗೆ ಗುಂಪೆ ವಲಯ ವಿದ್ಯಾರ್ಥಿವಾಹಿನಿಯ ಪ್ರಾಯೋಜಕತ್ವದಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ `ಪರೀಕ್ಷೆ-ನಿರೀಕ್ಷೆ' ಪರೀಕ್ಷಾ ಸಿದ್ಧತಾ ಕಾರ್ಯಾಗಾರ ಇತ್ತೀಚೆಗೆ ನಡೆಸಲಾಯಿತು. ಶಾಲಾ ವ್ಯವಸ್ಥಾಪಕರಾದ ಶಂಕರನಾರಾಯಣ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತೂರು ಶ್ರೀಭಾರತೀ ಕಾಲೇಜಿನ ಅನಂತನಾರಾಯಣ ಪದಕಣ್ಣಾಯ ಶುಭ ಹಾರೈಸಿದರು. ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಸಮರ್ಪಕವಾಗಿ ಉತ್ತರಿಸಿದಲ್ಲಿ ಅಧ್ಯಾಪಕರ ಮನಸ್ಸು ಅರಳುತ್ತದೆ. ಚೆನ್ನಾಗಿ ತಯಾರಿನಡೆಸಿ ಉತ್ತರ ತಿಳಿದಲ್ಲಿ ವಿದ್ಯಾರ್ಥಿಯ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದು ಉಂಡೆಮನೆ ವಿಶ್ವೇಶ್ವರ ಭಟ್ ವಿದ್ಯಾರ್ಥಿಗಳನ್ನು ಕಾರ್ಯಕ್ರಮದತ್ತ ಸೆಳೆಯುತ್ತಾ ವಿಶೇಷ ತರಗತಿ ಆರಂಭಿಸಿದರು. ಈಗಲೇ ಪರೀಕ್ಷಾ ತಯಾರಿ ನಡೆಸಿದರೆ ಸಾಮಾನ್ಯ ದಿನಕ್ಕೆ ನಾಲ್ಕು ಗಂಟೆ ತಯಾರಿ ಸಾಕಾಗುತ್ತದೆ. ದಿನ ಕಳೆದಂತೆ ತಯಾರಿ ಆರಂಭಿಸಿದರೆ ಕಲಿಕೆಯ ವೇಗ ಹೆಚ್ಚಾಗಿ ವಿಷಯಗಳನ್ನು ಸರಿಯಾಗಿ ಮನನ ಮಾಡದೆ ಎಡವುವ ಸಾಧ್ಯತೆ ಹೆಚ್ಚು. ಆದ್ದರಿಂದ ಸಾಕಷ್ಟು ಮೊದಲೇ ತಯಾರಿ ಅಗತ್ಯ ಎಂದರು. ಅಧ್ಯಯನ ಮಾಡುವಾಗ ಸರಿಯಾಗಿ ಅರ್ಥೈಸಿಕೊಂಡು ಮಾಡುವುದು ಬಹು ಮುಖ್ಯ ಅಂಶ ಎಂಬುದನ್ನು ನೆನಪಿಸಿದರು. ಓದುವ ವೇಳಾಪಟ್ಟಿ, ಅಗತ್ಯದ ವಿಶ್ರಾಂತಿ, ಮನೋದೈಹಿಕ ಚಟುವಟಿಕೆಗಳು, ಪೂರಕವಾಗಿ ಯುಕ್ತ ಆಹಾರದ ಅಗತ್ಯ ಇವುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. 180 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಂಡರು. ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಪ್ರಾಂಶುಪಾಲ ರಾಮಚಂದ್ರ ಭಟ್ ನೇರೋಳು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗುಂಪೆ ವಲಯ ಜೀವಿಕಾ ಪ್ರಧಾನ ಇ.ಎಚ್. ಗೋವಿಂದ ಭಟ್ ಧನ್ಯವಾದವಿತ್ತರು. ಮುಳ್ಳೇರಿಯ ಮಂಡಲ ವಿದ್ಯಾರ್ಥಿವಾಹಿನೀ ಪ್ರಧಾನ ಕೇಶವಪ್ರಸಾದ ಎಡಕ್ಕಾನ ಕಾರ್ಯಕ್ರಮ ಸಂಯೋಜನೆ ಮಾಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries