ಕಾಸರಗೋಡು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಸಮಾವೇಶ ಫೆ.23 ರಂದು ರಾಜಪುರದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಉದ್ಘಾಟಿಸುವರು. ಬಳಿಕ ಅಲ್ಪಸಂಖ್ಯಾಕ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಸಿ.ಸೆಬಾಸ್ಟಿನ್ ಮಾತನಾಡಲಿದ್ದಾರೆ.
ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಆಲಿ ಅಕ್ಬರ್ ಉದ್ಘಾಟಿಸುವರು. ಅಲ್ಪಸಂಖ್ಯಾಕ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವಿ.ಮ್ಯಾಥ್ಯೂ, ಪ್ರಧಾನ ಕಾರ್ಯದರ್ಶಿ ಅಗಸ್ಟಿನ್, ಕಾರ್ಯದರ್ಶಿ ಜಾರ್ಜ್ ಆಟ್ಕುಳಿ, ಕಾಸರಗೋಡು ಮಂಡಲ ಕಾರ್ಯದರ್ಶಿ ಥಾಮ್ಸನ್ ಜೇಮ್ಸ್ ಉಪಸ್ಥಿತರಿರುವರು.


