ಮುಳ್ಳೇರಿಯ: ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಲಿಕೋತ್ಸವ ಬುಧವಾರ ನಡೆಯಿತು.
ಕಾಸರಗೋಡು ಜಿ.ಪಂ. ಕ್ಷೇಮ ಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ನ್ಯಾಯಾವಾದಿ ಎ.ಪಿ. ಉಷಾ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ಳೂರು ಗ್ರಾ.ಪಂ.ಅಧ್ಯಕ್ಷೆ ಲತಾ ಯುವರಾಜ್ ಅಧ್ಯಕ್ಷತೆ ವಹಿಸಿದರು.ಕಾರಡ್ಕ ಬ್ಲಾಕ್ ಪಂಚಾಯತಿ ಸದಸ್ಯೆ ಸತ್ಯವತಿ ಸಿ.ರೈ, ಕುಂಬಳೆ ಬ್ಲಾಕ್ ಸಂಪನ್ಮೂಲ ಕೇಂದ್ರದ ಯೋಜನಾಧಿಕಾರಿ ಕುಂಞÂಕೃಷ್ಣನ್, ಬೆಳ್ಳೂರು ಪಂಚಾಯತಿ ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಗೀತಾ ಕೆ., ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎನ್.ಎಚ್. ಮೊಹಮ್ಮದ್, ಕಾಲೇಜು ಪ್ರಾಂಶುಪಾಲ ಕೃಷ್ಣ ಭಟ್ ಶುಭ ಹಾರೈಸಿದರು.
ಬೆಳ್ಳೂರು ಗ್ರಾ.ಪಂ.ಸದಸ್ಯೆ ಉಷಾ, ಹಿರಿಯ ಅಧ್ಯಾಪಕ ಕುಂಞÂರಾಮ ಮಣಿಯಾಣಿ, ಸಿಬ್ಬಂದಿ ಕಾರ್ಯದರ್ಶಿ ಮೋಹನನ್, ಮಾತೃ ಸಂಘದ ಅಧ್ಯಕ್ಷೆ ಶಾಂತಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ವಾರಿಜಾ ನೇರೋಳು ಸ್ವಾಗತಿಸಿ, ಕಾರ್ಯಕ್ರಮ ಸಮಿತಿ ಅಧ್ಯಕ್ಷೆ ಜಲಜಾಕ್ಷಿ ವಂದಿಸಿದರು. ಕಲಿಕಾ ಪ್ರದರ್ಶನದಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
