HEALTH TIPS

ಇಂದು ಕುಳೂರು ಶಾಲಾ ವಾರ್ಷಿಕೋತ್ಸವ:

             ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ಇಂದು(ಫೆ.2) ನಡೆಯಲಿದೆ.
      ಬೆಳಿಗ್ಗೆ 09:30 ಕ್ಕೆ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಅಪರಾಹ್ನ 03: ಕ್ಕೆ  ಸಭಾ ಕಾರ್ಯಕ್ರಮವನ್ನು ಕಾಸರಗೋಡು ಸಂಸದ ಪಿ. ಕರುಣಾಕರನ್ ಉದ್ಘಾಟಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ ವಹಿಸಲಿರುವರು. ಕಾರ್ಯಕ್ರಮದಲ್ಲಿ ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಂಶಾದ್ ಶುಕೂರ್, ಸದಸ್ಯೆ ಚಂದ್ರಾವತಿ ವಿ. ಪಿ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ, ಕ್ಷೇತ್ರ ನಿರೂಪಣಾಧಿಕಾರಿ ವಿಜಯ್ ಕುಮಾರ್ ಪಿ, ಮಧೂರು ಶಾಲಾ ಮುಖ್ಯೋಪಾಧ್ಯಾಯ ವಿನೋದ್ ಕುಮಾರ್ ಬಿ, ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಕುಂಬಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಗೀತಾ ಲೋಕನಾಥ್ ಶೆಟ್ಟಿ, ಕೆನರಾ ಬ್ಯಾಂಕಿನ ನಿವೃತ್ತ ಹಿರಿಯ ಪ್ರಬಂಧಕ ಪದ್ಮನಾಭ ಶೆಟ್ಟಿ ಮಾಣೂರು ಕುಳೂರು, ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಶೆಟ್ಟಿ ಎಲಿಯಾಣ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆ ಆಶಾಲತ ಕುಳೂರು, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷ ಕಮಲಾಕ್ಷ ಕಲ್ಕಾರ್ ಉಪಸ್ಥಿತರಿರುವರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ವಾರ್ಷಿಕ ವರದಿ ವಾಚಿಸುವರು. ಬಳಿಕ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಬಳಿಕ ಯಶಸ್ವೀ ಕಲಾವಿದರು ಮಂಜೇಶ್ವರ ಇವರಿಂದ 'ಏತ್ ಪಂಡಲಾ ಆತೆ' ಎನ್ನುವ ತುಳು ಹಾಸ್ಯಮಯ ನಾಟಕ ಪ್ರದರ್ಶನ ನಡೆಯಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries