HEALTH TIPS

ಕನ್ನಡಿಗರ ಸಮಸ್ಯೆ : ಜನಪ್ರತಿನಿಧಿಗಳ ಸಭೆ

ಕಾಸರಗೋಡು: ಭಾಷಾವಾರು ಪ್ರಾಂತ್ಯ ರಚನಾ ನಂತರ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕøತಿ ಮೇಲೆ ಆಗುತ್ತಿರುವಂತಹ ದಾಳಿಯಿಂದಾಗಿ ಕನ್ನಡ ಭಾಷೆ, ಸಂಸ್ಕøತಿಗೆ ಅನ್ಯಾಯ ಮತ್ತು ಅಪಚಾರವಾಗುತ್ತಿದೆ. ಕನ್ನಡ ಮಾಧ್ಯಮದ ಶಾಲೆಗಳಲ್ಲಿ ಕನ್ನಡದ ಗಂಧಗಾಳಿ ಇಲ್ಲದ ವ್ಯಕ್ತಿಗಳ ನೇಮಕಾತಿಯ ನಡೆಯುತ್ತಿದ್ದು, ಈ ಮೂಲಕ ಕನ್ನಡ ಭಾಷೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಕನ್ನಡ ಭಾಷೆ, ಸಂಸ್ಕøತಿ ನಾಶವಾಗಿ ಕನ್ನಡಿಗರೇ ನಿರ್ನಾಮವಾಗುವಂತಹ ಮತ್ತು ಒಂದು ಸಮಾಜವೇ ನಾಶವಾಗುವ ಸಂದರ್ಭ ಸನ್ನಿಹಿತವಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡದ ಬಗೆಗಿನ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಾ.3 ರಂದು ಬೆಳಿಗ್ಗೆ 10 ಗಂಟೆಗೆ ಕುಂಬಳೆ ಮಾಧವ ಪೈ ಸಭಾಂಗಣದಲ್ಲಿ (ಸಿಂಡಿಕೇಟ್ ಬ್ಯಾಂಕ್‍ನ ಮಹಡಿ)ದಲ್ಲಿ ತ್ರಿಸ್ತರ ಪಂಚಾಯತ್‍ಗಳ ಕನ್ನಡಿಗ ಜನಪ್ರತಿನಿಧಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಕನ್ನಡ ನೆಲದಲ್ಲಿ ಕನ್ನಡ ಉಳಿಸಿ ಬೆಳೆಸಲು ಸಹಕರಿಸಬೇಕಾಗಿ ಕನ್ನಡ ಹೋರಾಟ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries