HEALTH TIPS

ತೀರಿದ ಹಗೆ- ಎನ್ ಕೌಂಟರ್: ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಸೇರಿ, ಇಬ್ಬರು ಜೆಇಎಮ್ ಉಗ್ರರು ಹತ

ಪುಲ್ವಾಮ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಇಂದು ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭಾರತೀಯ ಸೇನೆ ನಿನ್ನೆ ಹೊಡೆದುರುಳಿಸುವಲ್ಲಿ ಸಫಲವಾಗಿದೆ. ಪುಲ್ವಾಮದ ಪಿಂಗ್ಲಾನ್ ಪ್ರಾಂತ್ಯದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಭೀಕರ ಚಕಮಕಿ ನಡೆಯುತ್ತಿದ್ದು, ಸೇನೆಯ ಗುಂಡಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ರಷೀದ್ ಘಾಜಿ ಕೂಡ ಸೇರಿದ್ದಾನೆ ಎನ್ನಲಾಗಿದೆ. ಅಂತೆಯೇ ಹತನಾದ ಮತ್ತೋರ್ವ ನನ್ನು ಜೆಇಎಂ ಕಮಾಂಡರ್ ಹಿಲಾಲ್ ಎಂದು ಗುರುತಿಸಲಾಗಿದೆ. ಅಬ್ದುಲ್ ರಷೀದ್ ಘಾಜಿ ಜೆಇಎಂ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಆಗಿದ್ದು, ಕಾಶ್ಮೀರದಲ್ಲಿ ಉಗ್ರ ಸಂಘಟನೆಗೆ ಯುವಕರನ್ನು ಸೆಳೆಯುವ ಮತ್ತು ಅವರಿಗೆ ತರಬೇತಿ ನೀಡುವ ಮೇಲುಸ್ತುವಾರಿ ನೊಡಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಅಲ್ಲದೆ ಕಳೆದ ಫೆಬ್ರವರಿ ನಾಲ್ಕರಂದು ಪುಲ್ವಾಮ ಹೊರವಲಯದಲ್ಲಿ ನಡೆದ ಸೇನಾವಾಹನಗಳ ಮೇಲಿನ ಆತ್ಮಹತ್ಯಾ ಬಾಂಬ್ ದಾಳಿಯ ನೇತೃತ್ವವನ್ನೂ ಕೂಡ ಇದೇ ಅಬ್ದುಲ್ ರಷೀದ್ ಘಾಜಿ ವಹಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಘಟನಾ ಪ್ರದೇಶದಲ್ಲಿ ಮತ್ತಿಬ್ಬರು ಉಗ್ರರು ಅವಿತಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ನಿನ್ನೆ ಇಂದು ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಸೇನೆಯ ಮೇಜರ್ ಹಾಗೂ ಓರ್ವ ನಾಗರಿಕ ಸೇರಿದಂತೆ ಒಟ್ಟು 5 ಮಂದಿ ಸಾವನಪ್ಪಿದ್ದರು. ಹುತಾತ್ಮ ಯೋಧರನ್ನು ಮೇಜರ್ ವಿ ಎಸ್ ಧೌಂಡಿಯಾಲ್, ಹವಾಲ್ದಾರ್ ಶಿಯೋ ರಾಮ್, ಸಿಪಾಯಿ ಅಜಯ್ ಕುಮಾರ್ ಮತ್ತು ಸಿಪಾಯಿ ಹರಿ ಸಿಂಗ್ ಎಂದು ಗುರುತಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries