ಶಾಲಾ ಕಲಿಕೋತ್ಸವ
0
ಫೆಬ್ರವರಿ 13, 2019
ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಕಲಿಕೋತ್ಸವದ ಉದ್ಘಾಟನಾ ಕಾರ್ಯಕ್ರಮ ದಿ.ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಜಿ.ಎಚ್.ಎಸ್.ಎಸ್. ಪೈವಳಿಕೆ ನಗರದ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಕಾಂತ್ ರಾವ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮಾತೃಸಂಘದ ಅಧ್ಯಕ್ಷೆ ಸೌಮ್ಯ ಪ್ರಕಾಶ್ ವಹಿಸಿದ್ದರು. ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ, ಮೀಂಜ ಗ್ರಾಮ ಪಂಚಾಯತಿ ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಕೃಷ್ಣ ಕೆ. ಹಾಗೂ ಎಸ್.ಎಸ್.ಎ. ಸಂಯೋಜಕಿ ಮೋಹಿನಿ ಟೀಚರ್ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯ ಸುಧಾಕರ ವಿ. ಸ್ವಾಗತಿಸಿ, ಶಾಲಾ ಅಧ್ಯಾಪಕರಾದ ರಘುವೀರ್ ರಾವ್ ವಂದಿಸಿದರು. ಶಾಲಾ ಆಧ್ಯಾಪಕರಾದ ಸುನೀಲ್ ಕುಮಾರ್ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು.

