
ಯಾಗಭೂಮಿಗೆ ಬುಧವಾರ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ ಮಾಹಿತಿ ನೀಡಿದರು. ಯಾಗದ ದಿನದಂದು ಸಮರ್ಪಿಸಲು ಅಗತ್ಯವಿರುವ ಎಳನೀರು ಸಮರ್ಪಿಸುವ ನಿಟ್ಟಿನಲ್ಲಿ ಫೆ.18 ರಂದು ಬೆಳಿಗ್ಗೆ 9 ಕ್ಕೆ ವಿವಿಧೆಡೆಗಳಿಂದ ಸಂಗ್ರಹಿಸಿದ ಎಳನೀರನ್ನು ಉಪ್ಪಳದಿಂದ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಗುವುದೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ.


