48 ಗಂಟೆಗಳ ಮುನ್ನ ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೆ ಚುನಾವಣಾ ಆಯೋಗ ಬ್ರೇಕ್!!
0
ಮಾರ್ಚ್ 17, 2019
ನವದೆಹಲಿ: 48 ಗಂಟೆಗಳ ಮುನ್ನ ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.
ನಿನ್ನೆಯಿಂದಲೇ(ಮಾ.16) ಈ ಆದೇಶ ಹೊರಡಿಸಿರುವ ಚುನಾವಣಾ ಆಯೋಗ, ಪ್ರಣಾಳಿಕೆ ಬಿಡುಗಡೆಯನ್ನೂ ಈಗ ನೀತಿ ಸಂಹಿತೆ ವ್ಯಾಪ್ತಿಗೆ ತಂದಿದೆ.
ಈ ವರೆಗೂ ಪ್ರಣಾಳಿಕೆ ಬಿಡುಗಡೆಯನ್ನು ನೀತಿ ಸಂಹಿತೆ ವ್ಯಾಪ್ತಿಗೆ ತಂದಿರಲಿಲ್ಲ. 2014 ರ ಚುನಾವಣೆಯಲ್ಲಿ ಬಿಜೆಪಿ ಮೊದಲ ಹಂತದ ಮತದಾನದ ದಿನದಂದು ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಈ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಆದರೆ ಅಂದು ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

